ಅನ್ ಲಾಕ್ 3.0 ಜಾರಿಯಾಗಿರುವ ಹಿನ್ನೆಲೆಯಲ್ಲಿ ಬರುವ ಭಕ್ತರಿಗೆ ಬೆಳಿಗ್ಗೆ 7 ರಿಂದ ಸಂಜೆ 7 ರ ವರೆಗೂ ಕೂಡಾ ದೊರಕಲಿದೆ ಮಾದಪ್ಪನ ದರ್ಶನ‌. ಕೊರೊನಾ ಕಾರಣದಿಂದ ಮುನ್ನೆಚ್ಚರಿಕೆಯ ಕ್ರಮವಾಗಿ ಚಾಮರಾಜನಗರ ಜಿಲ್ಲೆಯಲ್ಲಿ ಸಂಜೆ 4 ರಿಂದ ಬೆಳಿಗ್ಗೆ 6 ರವರೆಗೆ ಅಳವಡಿಸಲಾಗಿದ್ದ ಲಾಕ್ ಡೌನ್ ಅನ್ನು ಅಲ್ಲಿನ ಡಿಸಿ ಎಂ.ಆರ್.ರವಿ ಅವರು ತೆರವುಗೊಳಿಸಿದ್ದಾರೆ. ಜಿಲ್ಲೆಯಲ್ಲಿ ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ನೀಡಲು ಜಿಲ್ಲೆಯಲ್ಲಿ ಲಾಕ್ ಡೌನ್ ತೆರವು ಮಾಡಿರುವ ಡಿಸಿ ಅವರು ಭಾನುವಾರ ಕರ್ಫ್ಯೂ ಕೂಡಾ ತೆರವುಗೊಳಿಸಿದ್ದಾರೆ.

ಅಲ್ಲದೇ ಅವರು ಜನರಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವ ಹಾಗೆ ಹಾಗೂ ಮಾಸ್ಕ್ ಧರಿಸುವಂತೆ ಮನವಿಯನ್ನು ಕೂಡಾ ಮಾಡಿಕೊಂಡಿದ್ದಾರೆ. ಇನ್ನು ಹೋಂ ಕ್ವಾರಂಟೈನ್ ನಲ್ಲಿ ಇರುವವರ ನಿಗಧಿತ ಸಮಯದವರೆಗೆ ಮನೆಗಳಲ್ಲಿ ಇದ್ದು ನಿಯಮವನ್ನು ಪಾಲನೆ ಮಾಡಬೇಕೆಂದು ಹಾಗೆ ಮಾಡದೇ ನಿಯಮಗಳನ್ನು ಉಲ್ಲಂಘನೆ ಮಾಡಿ ಸಾರ್ವಜನಿಕ ಸ್ಥಳಗಳಲ್ಲಿ ಓಡಾಡಿದರೆ ಅಂತಹವರ ವಿರುದ್ಧ ಕಠಿಣ ಕ್ರಮವನ್ನು ಜರುಗಿಸುವುದಾಗಿ, ಎಫ್.ಐ.ಆರ್. ದಾಖಲು ಮಾಡುವುದಾಗಿ ಅವರು ಎಚ್ಚರಿಕೆಯನ್ನು ಕೂಡಾ ನೀಡಿದ್ದಾರೆ.

ಇನ್ನು ಮಲೆ ಮಹದೇಶ್ವರ ಸ್ವಾಮಿಯ ದೇಗುಲವು ವಾರದ ಎಲ್ಲಾ ದಿನಗಳಲ್ಲಿ ತೆರೆದಿರುತ್ತದೆ ಎಂದು ಕ್ಷೇತ್ರದ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಅವರಾದ ಜಯವಿಭವಸ್ವಾಮಿಯವರು ತಿಳಿಸಿದ್ದಾರೆ.
ಇನ್ನು ಮುಂದೆ ಭಾನುವಾರ ಕೂಡಾ ಭಕ್ತರಿಗೆ ಮಾದಪ್ಪನ ದರ್ಶನವನ್ನು ಮಾಡುವ ಅವಕಾಶವಿದ್ದು ಬೆಳಿಗ್ಗೆ ಏಳರಿಂದ ಸಂಜೆ ಏಳರವರೆಗೆ ದರ್ಶನವನ್ನು ಪಡೆಯುವ ಅವಕಾಶವಿದೆ. ಆದರೆ ಯಾರಿಗೂ ಕೂಡಾ ಅಲ್ಲಿ ವಾಸ್ತವ್ಯ ಇರಲು ಅವಕಾಶವನ್ನು ನೀಡಲಾಗುವುದಿಲ್ಲ ಎಂದು ತಿಳಿಸಿದ್ದಾರೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here