ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಯ ಕುರಿತಾಗಿ ಕಳೆದ 19 ದಿನಗಳಿಂದ ನಡೆಯುತ್ತಿದ್ದ ಪ್ರಹಸನದಲ್ಲಿ ಮಹತ್ವದ ಟ್ವಿಸ್ಟ್​ ದೊರೆತಿದೆ. ಆ ಮಹತ್ವದ ಟ್ವಿಸ್ಟ್ ಏನೆಂದರೆ ಮಹಾರಾಷ್ಟ್ರದಲ್ಲಿ ಇದೀಗ ರಾಷ್ಟ್ರಪತಿ ಆಡಳಿತ ಜಾರಿಯಾಗಿದೆ. ಹೌದು, ರಾಜ್ಯದಲ್ಲಿ ಸರ್ಕಾರ ರಚಿಸಲು ಯಾವುದೇ ಪಕ್ಷಕ್ಕೂ ಸಾಧ್ಯವಿಲ್ಲವಾದ್ದರಿಂದ ರಾಷ್ಟ್ರಪತಿ ಆಡಳಿತ ಜಾರಿಗೊಳಿಸುವಂತೆ ಮಹಾರಾಷ್ಟ್ರ ರಾಜ್ಯಪಾಲರಾದ ಭಗತ್​ಸಿಂಗ್​ ಕೋಶ್ಯಾರಿ ಅವರು ಶಿಫಾರಸು ಮಾಡಿದ ಒಂದು ಗಂಟೆ ಅವಧಿಯಲ್ಲಿ ಕೇಂದ್ರ ಸಚಿವ ಸಂಪುಟ ರಾಜ್ಯಪಾಲರ ಶಿಫಾರಸನ್ನು ಅನುಮೋದಿಸಿದ್ದು, ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಜಾರಿಗೊಳಿಸಲಾಗಿದೆ.

ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಜಾರಿಗೆ ತರಲು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಗ್ರೀನ್​​ ಸಿಗ್ನಲ್​​​ ನೀಡಿದ್ದಾಗಿದೆ. ಮಹಾರಾಷ್ಟ್ರದಲ್ಲಿ
ಚುನಾವಣಾ ಫಲಿತಾಂಶ ಪ್ರಕಟವಾಗಿ ಈಗಾಗಲೇ 19 ದಿನಗಳು ಕಳೆದಿವೆ. ಆದರೆ ಅಲ್ಲಿ ಯಾವುದೇ ಪಕ್ಷಗಳು ಕೂಡಾ ಸರ್ಕಾರ ರಚನೆಗೆ ಮುಂದಾಗದೆ ರಾಜಕೀಯ ಅಸ್ಥಿರತೆ ಉಂಟಾಗಿತ್ತು. ಪರಿಸ್ಥಿತಿ ಹಾಗೇ ಮುಂದುವರೆಯುವುದು ರಾಜ್ಯದ ಹಿತದೃಷ್ಟಿಯಿಂದ ಸರಿಯಲ್ಲ ಎನ್ನುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ರಾಜ್ಯಪಾಲ ಕೋಶ್ಯರಿ ರಾಷ್ಟ್ರಪತಿ ಆಳ್ವಿಕೆ ಹೇರುವಂತೆ ಶಿಫಾರಸು ಮಾಡಿದ್ದರು.

ಇದರ ಜೊತೆಗೆ ಕೇಂದ್ರ ಸಚಿವ ಸಂಪುಟ ಕೂಡ ರಾಜ್ಯಪಾಲರ ಶಿಫಾರಸ್ಸಿಗೆ ಅನುಮೋದನೆ ನೀಡಿದ ಹಿನ್ನೆಲೆಯಲ್ಲಿ, ಅದನ್ನು ಮಾನ್ಯ ಮಾಡಿರುವ ರಾಷ್ಟ್ರಪತಿ ರಾಮನಾಥ್ ಕೋವಿಂದ್ ರಾಷ್ಟ್ರಪತಿ ಆಳ್ವಿಕೆಗೆ ಅಂಕಿತ ಹಾಕುವ ಮೂಲಕ ಮಹಾರಾಷ್ಟ್ರದ ಸರ್ಕಾರ ರಚನೆಯ ಪ್ರಹಸನಕ್ಕೊಂದು ಟ್ವಿಸ್ಟ್ ದೊರೆತಿದೆ. ಸರ್ಕಾರ ರಚನೆಗೆ ನಡೆಯುತ್ತಿರುವ ಆಗು ಹೋಗುಗಳ ಬಗ್ಗೆ ಮಾದ್ಯಮಗಳಲ್ಲಿ ದೊಡ್ಡ ಸುದ್ದಿಯಾಗಿತ್ತು. ಅಲ್ಲದೆ ಅಲ್ಲಿನ ಅತಂತ್ರ ಸ್ಥಿತಿಯು ಯಾವಾಗ ನಿಯಂತ್ರಣಕ್ಕೆ ಬರಲಿದೆ ಎಂಬುದನ್ನು ಕಾಯುತ್ತಿದ್ದವರಿಗೆ ಉತ್ತರ ಸಿಕ್ಕಿದೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here