ಇದೇ ನವೆಂಬರ್ 9 ರಂದು ಕರ್ತಾರ್‌ಪುರ ಕಾರಿಡಾರ್ ಉದ್ಘಾಟನೆಯಾಗಲಿದ್ದು, ಈ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಆಹ್ವಾನವನ್ನು ನೀಡಿದೆ ಪಾಕಿಸ್ತಾನ. ಮನಮೋಹನ್ ಸಿಂಗ್ ಅವರು ಸಿಖ್ ಸಮುದಾಯವನ್ನು ಪ್ರತಿನಿಧಿಸುವುದರಿಂದ ಈ ಕಾರ್ಯಕ್ರಮಕ್ಕೆ ಅವರಿಗೆ ಆಹ್ವಾನ ನೀಡುತ್ತಿರುವುದಾಗಿ ಹೇಳಿದ್ದಾರೆ ಪಾಕಿಸ್ತಾನದ ವಿದೇಶಾಂಗ ಸಚಿವ ಶಾ ಮಹಮೂದ್ ಖುರೇಷಿ. ಈ ಕಾರಿಡಾರ್ ಉದ್ಘಾಟನೆ ಸಮಾರಂಭ ಗುರುನಾನಕ್ ಅವರ 550 ನೇ ಜನ್ಮ ದಿನೋತ್ಸವದ ಅಂಗವಾಗಿ ಮೂರು ದಿನಗಳ ಕಾಲ ನಡೆಯಲಿದೆ ಎಂದು ಹೇಳಲಾಗಿದೆ.

ಪಾಕಿಸ್ತಾನದ ನೀಡಿರುವ ಈ ಅಹ್ವಾನವನ್ನು ಮನಮೋಹನ್ ಸಿಂಗ್ ಅವರು ತಿರಸ್ಕರಿಸಿದ್ದು, ಪಾಕಿಸ್ತಾನಕ್ಕೆ ಹೋಗಲು ಇದು ಸೂಕ್ತ ಸಮಯವಲ್ಲ ಎಂದು ಹೇಳಿದ್ದಾರೆ. ಇದೇ ಸಂದರ್ಭದಲ್ಲಿ ಪಾಕಿಸ್ತಾನದ ಕರ್ತಾರ್‌ಪುರ್ ಸಾಹಿಬ್ ಗುರುದ್ವಾರಕ್ಕೆ ಭೇಟಿ ನೀಡುವ ಯಾತ್ರಾರ್ಥಿಗಳಿಂದ ಸೇವಾ ಶುಲ್ಕವೆಂದು ಪಾಕಿಸ್ತಾನ ಸಂಗ್ರಹಿಸುವ 20 ಡಾಲರ್ ಹಣವನ್ನು ಮರು ಪರಿಶೀಲನೆ ಮಾಡುವಂತೆ ಭಾರತ ಪಾಕಿಸ್ತಾನ ಸರ್ಕಾರಕ್ಕೆ ಮನವಿಯೊಂದನ್ನು ಮಾಡಲಾಗಿದೆ ಎನ್ನಲಾಗಿದೆ. .

ಸಮಾರಂಭದ ಆರಂಭದಲ್ಲಿ ಪ್ರತಿದಿನ ಭಾರತದಿಂದ 5000 ಯಾತ್ರಾರ್ಥಿಗಳು ಅಲ್ಲಿಗೆ ಭೇಟಿ ನೀಡಲು ಅವಕಾಶವನ್ನು ನೀಡಲಾಗುತ್ತದೆ ಎನ್ನಲಾಗಿದೆ. ನಂತರದ ದಿನಗಳಲ್ಲಿ10,000 ಯಾತ್ರಾರ್ಥಿಗಳ ಪ್ರವೇಶಕ್ಕೆ ಅನುವು ಮಾಡಿಕೊಡಲಾಗುವುದು ಎಂದು ವಿದೇಶಾಂಗ ಇಲಾಖೆಯು ತಿಳಿಸಿದೆ ಎನ್ನಲಾಗಿದೆ. ಆದರೆ ಸೇವಾ ಶುಲ್ಕದ ಬಗ್ಗೆ ಮರು ಪರಿಶೀಲನೆ ಮಾಡುವಂತೆ ಭಾರತ ಮನವಿ ಮಾಡಿರುವುದು ಹೌದು.

News

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here