ಮಾಜಿ ಪ‍್ರಧಾನಿ ಮನಮೋಹನ್‌ ಸಿಂಗ್‌ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಏಮ್ಸ್‌) ಮೂಲಗಳು ಸೋಮವಾರ ಬೆಳಿಗ್ಗೆ ತಿಳಿಸಿವೆ.ಔಷಧಿ ನೀಡಿದ ಬಳಿಕ ಮನಮೋಹನ್ ಸಿಂಗ್ ಅವರಿಗೆ ಜ್ವರ ಕಾಣಿಸಿಕೊಂಡಿದೆ. ಜ್ವರ ಬರಲು ಬೇರೇನಾದರೂ ಕಾರಣಗಳಿವೆಯೇ ಎಂಬ ಕುರಿತು ತಪಾಸಣೆ ನಡೆಸಲಾಗುತ್ತಿದೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ. ಹೃದ್ರೋಗ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಏಮ್ಸ್ ಮೂಲಗಳು ತಿಳಿಸಿವೆ.

 

ಹೃದ್ರೋಗ ಸಮಸ್ಯೆ ಕಾಣಿಸಿಕೊಂಡ ಕಾರಣ 87 ವರ್ಷ ವಯಸ್ಸಿನ ಸಿಂಗ್ ಅವರನ್ನು ಭಾನುವಾರ ರಾತ್ರಿ ಆಸ್ಪತ್ರೆಗೆ ದಾಖಲಾಗಿತ್ತು. ಹೃದ್ರೋಗ ತಜ್ಞ ಡಾ. ನಿತೀಶ್‌ ನಾಯ್ಕ್‌ ಅವರು ಸಿಂಗ್‌ ಅವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಸಿಂಗ್ ಅವರು 2009ರಲ್ಲಿ ಹೃದಯದ ಬೈಪಾಸ್‌ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.87 ವರ್ಷದ ವರ್ಷದ ಅವರನ್ನು ನೆನ್ನೆ ರಾತ್ರಿ 8.45ಕ್ಕೆ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೃದ್ರೋಗ ತಜ್ಞ ಡಾ. ನಿತೀಶ್‌

ನಾಯ್ಕ್‌ ಅವರು ಸಿಂಗ್‌ ಅವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಅವರಿಗೆ 2009ರಲ್ಲಿ ಹೃದಯದ ಬೈಪಾಸ್‌ ಶಸ್ತ್ರಚಿಕಿತ್ಸೆ ಆಗಿತ್ತು.ಕಾಂಗ್ರೆಸ್‌ನ ಹಿರಿಯ ಮುಖಂಡರಾಗಿರುವ ಅವರು, ಸದ್ಯ ರಾಜ್ಯಸಭೆಯಲ್ಲಿ ರಾಜಸ್ಥಾನವನ್ನು ಪ್ರತಿನಿಧಿಸುತ್ತಿದ್ದಾರೆ. 2004ರಿಂದ 2014ರ ಅವಧಿಯಲ್ಲಿ ಅವರು ಪ್ರಧಾನಿಯಾಗಿದ್ದರು.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here