ಈಗ ದೇಶಾದ್ಯಂತ ಸಂಚಲನ ಸೃಷ್ಟಿಸಿರುವ ಲೋಕಸಭಾ ಚುನಾವಣೆಯಲ್ಲಿ ಪ್ರತಿಷ್ಠೆಯ ಕಣವಾಗಿರುವ ಮಂಡ್ಯ ಲೋಕಸಭಾ ಚುನಾವಣಾ ಅಖಾಡ ಪರಸ್ಪರ ವಾಕ್ಸಮರಕ್ಕೆ ವೇದಿಕೆಯಾಗಿದೆ. ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣಾ ರಣರಂಗವನ್ನು ಪ್ರವೇಶಿಸಿರುವ ನಟಿ ಸುಮಲತಾ ಅಂಬರೀಷ್​ ಅವರು ಸಿಎಂ ಎಚ್​.ಡಿ. ಕುಮಾರಸ್ವಾಮಿ ಅವರಿಗೆ ಪರೋಕ್ಷವಾಗಿ ಟಾಂಗ್​ ನೀಡಿದ್ದಾರೆ. ಸೋಮವಾರ ಮೈತ್ರಿ ಅಭ್ಯರ್ಥಿ ನಿಖಿಲ್​ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ ನಂತರ ನಡೆದ ಮೈತ್ರಿ ಸರ್ಕಾರದ ಬೃಹತ್​ ಸಮಾವೇಶದಲ್ಲಿ ಸಿಎಂ ಕುಮಾರಸ್ವಾಮಿ ಅವರು ನಟಿ ಸುಮಲತಾ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದರು. ಇದಕ್ಕೆ ಪ್ರತಿಯಾಗಿ ತಮ್ಮ ಫೇಸ್​ಬುಕ್​ ಖಾತೆಯ ಮೂಲಕ ನಿಮ್ಮ ದಬ್ಬಾಳಿಕೆಗೆಲ್ಲ ನಾವು ಬಗ್ಗುವುದಿಲ್ಲ ಎಂದು ಪರೋಕ್ಷವಾಗಿ ಸಿಎಂ ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದ್ದಾರೆ.

ನಾನು ಸೌಮ್ಯವಾಗಿ ಪ್ರೀತಿಯಿಂದ ..ಭಾರತೀಯ ಪ್ರಜಾಪ್ರಭುತ್ವದ ಘನತೆಯನ್ನು ಗಾಂಭೀರ್ಯವನ್ನು ಗಮನದಲ್ಲಿಟ್ಟುಕೊಂಡು ಚುನಾವಣೆ ಎದುರಿಸುತ್ತಿದ್ದೇನೆ ..ನಾನು ದಬ್ಬಾಳಿಕೆಗಳಿಗೆ ಬೆದರಿಕೆಗಳಿಗೆ ಬಗ್ಗದ ಜಗ್ಗದ ..ಪ್ರಜಾಪ್ರಭುತ್ವವನ್ನು ಉಳಿಸುವ ಸಲುವಾಗಿ .ಅತ್ಯಂತ ಉದಾತ್ತವಾದ ಆದರ್ಶಗಳನ್ನು ಮುಂದಿಟ್ಟುಕೊಂಡು ಚುನಾವಣೆಯನ್ನು ಎದುರಿಸುವ ನಡೆಸುವ

ಮನಸ್ಥಿತಿಯಿಂದ ಚುನಾವಣಾ ಕಣದಲ್ಲಿದ್ದೇನೆ ಮಂಡ್ಯದ ನನ್ನ ಪ್ರೀತಿಯ ಜನರು ಇದನ್ನು ಸ್ವೀಕರಿಸುತ್ತಾರೆ ಎಂದು ನನ್ನ ಬಲವಾದ ನಂಬಿಕೆ ಇದೆ……. ಎಂದು  ಸುಮಲತಾ ಅಂಬರೀಶ್ ತಿಳಿಸಿದ್ದಾರೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here