ರಾಜ್ಯಾದ್ಯಂತ ಅಟ್ಟಹಾಸ ಮೆರೆಯುತ್ತಿರುವ ಕೊರೋನಾ ಇದೀಗ ರಾಜಕಾರಣಿಗಳಿಗೂ ಸಹ ತಲೆನೋವಾಗಿ ಪರಿಣಮಿಸಿದೆ. ರಾಜ್ಯದ ಹಲವಾರು ರಾಜಕಾರಣಿಗಳಲ್ಲಿ ಕಾಣಿಸಿಕೊಂಡಿರುವ ಕೊರೊನಾ ಸೋಂಕು ಇದೀಗ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರಿಗೆ ಕಾಣಿಸಿಕೊಂಡಿದೆ. ತನಗೆ ಕೊರೋನಾ ಪಾಸಿಟಿವ್ ಇರುವುದನ್ನು ಸುಮಲತಾ ಅಂಬರೀಶ್ ಅವರು ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಸುಮಲತಾ ಅಂಬರೀಶ್ ಅವರು ಆತ್ಮೀಯರೆ,

ಶನಿವಾರ, ಜುಲೈ 4ರಂದು, ನನಗೆ ಸ್ವಲ್ಪ ತಲೆನೋವು ಮತ್ತು ಗಂಟಲು ನೋವು ಕಾಣಿಸಿಕೊಂಡಿತ್ತು. ನಿರಂತರವಾಗಿ ನನ್ನ ಕ್ಷೇತ್ರದ ಕಾರ್ಯಗಳಲ್ಲಿ ತೊಡಗಿದ್ದರಿಂದ ಮತ್ತು ಕೊರೊನಾ ಪೀಡಿತ ಪ್ರದೇಶಗಳಿಗೂ ಭೇಟಿ ಕೊಟ್ಟಿದ್ದರಿಂದ, ಕೋವಿಡ್ 19 ಪರೀಕ್ಷೆಗೆ ಒಳಗಾದೆ. ಇವತ್ತು ಪಾಸಿಟಿವ್ ಎಂದು ಫಲಿತಾಂಶ ಬಂದಿದೆ. ಹಾಗಾಗಿ ವೈದ್ಯರ ಸಲಹೆ ಪಡೆದುಕೊಂಡು ಅಗತ್ಯ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದೇನೆ. ಮನೆಯಲ್ಲಿಯೇ ಕ್ವಾರಂಟೈನ್ ಗೆ ಒಳಪಟ್ಟಿದ್ದೀನಿ.

ರೋಗನಿರೋಧಕ ಶಕ್ತಿಯು ನನ್ನಲ್ಲಿ ಪ್ರಬಲವಾಗಿದೆ ಮತ್ತು ನಿಮ್ಮ ಆಶೀರ್ವಾದ ನನ್ನ ಮೇಲೆ ಇರುವುದರಿಂದ ಬೇಗ ಗುಣಮುಖ ಆಗುತ್ತೇನೆ. ಈಗಾಗಲೇ ನನ್ನನ್ನು ಭೇಟಿಯಾದ ವ್ಯಕ್ತಿಗಳ ವಿವರವನ್ನು ಸರಕಾರಿ ಅಧಿಕಾರಿಗಳಿಗೆ ಕೊಟ್ಟಿರುವೆ. ಆದರೂ ನನ್ನನ್ನು ಭೇಟಿಯಾದವರಲ್ಲಿ ಯಾರಿಗಾದರೂ ಕೋವಿದ್ ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ಪರೀಕ್ಷೆ ಮಾಡಿಸಲು ವಿನಂತಿಸುತ್ತೇನೆ. ನಿಮ್ಮ ಹಾರೈಕೆ ಇರಲಿ.

ಸುಮಲತಾ ಅಂಬರೀಷ್
ಸದಸ್ಯೆ, ಮಂಡ್ಯ ಲೋಕಸಭಾ ಕ್ಷೇತ್ರ
ಎಂದು ಬರೆದುಕೊಂಡಿದ್ದಾರೆ. ಜನಸಾಮಾನ್ಯರು ಸೇರಿದಂತೆ ರಾಜಕಾರಣಿಗಳಲ್ಲಿ ಯೂ ಸಹ ತಲ್ಲಣ ಹುಟ್ಟಿಸಿರುವ ಕೊರೋನಾ ದಿನೇ ದಿನೇ ತನ್ನ ಪ್ರಭಾವ ಹೆಚ್ಚಿಸುತ್ತಲೇ ಇದೆ. ಸುಮಲತಾ ಅಂಬರೀಶ್ ಅವರು ಬೇಗ ಗುಣಮುಖರಾಗಲೆಂದು ನಾವು ಹಾರೈಸೋಣ.

ಆತ್ಮೀಯರೆ, ಶನಿವಾರ, ಜುಲೈ 4ರಂದು, ನನಗೆ ಸ್ವಲ್ಪ ತಲೆನೋವು ಮತ್ತು ಗಂಟಲು ನೋವು ಕಾಣಿಸಿಕೊಂಡಿತ್ತು. ನಿರಂತರವಾಗಿ ನನ್ನ ಕ್ಷೇತ್ರದ…

Sumalatha Ambareesh यांनी वर पोस्ट केले सोमवार, ६ जुलै, २०२०

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here