ಕಾಂಗ್ರೆಸ್ ಪಕ್ಷದಲ್ಲಿ ಸದ್ಯಕ್ಜೆ ಭಿನ್ನಮತ ಶಮನವಾಗುವ ಲಕ್ಷಣವೇ ಕಂಡು ಬರುತ್ತಿಲ್ಲ?
ಖಾತೆ ವಂಚಿತ ಅತೃಪ್ತ ಶಾಸಕರು ಬಂಡಾಯದ ಬಿಸಿಯನ್ನು ಹೈಕಮಾಂಡ್ ಗೆ ಮುಟ್ಟಿಸಲು ತಯಾರಾಗುತ್ತಿರುವ ಆಗಿದೆ. ಮಾಜಿ ನೀರಾವರಿ ಸಚಿವ ಎಂ.ಬಿ.ಪಾಟೀಲ್ ರವರು ನಾಳೆ ಸತೀಶ್ ಜಾರಕೀಹೋಳಿ, ಡಾಃ ಸುಧಾಕರ್, ರಾಮಲಿಂಗಾರೆಡ್ಡಿ ಸೇರಿದಂತೆ 15 ಜನರನ್ನು ಖಾಸಗಿ ಹೋಟೆಲ್ ಒಂದರಲ್ಲಿ ನಾಳೆ ಸಭೆ ಸೇರುವಂತೆ ಸಂದೇಶವನ್ನು ರವಾನಿಸಿದ್ದಾರೆ‌ ಈ ಮೂಲಕ ನೇರವಾಗಿ ಕಾಂಗ್ರೆಸ್ ನ ಹೈಕಮಾಂಡ್ ಗೆ ಸಂದೇಶವನ್ನು ಸಾರುವ ನಿಟ್ಟಿನಲ್ಲಿ ತಮ್ಮ ಕೆಲಸವನ್ನು ಪ್ರಾರಂಭಿಸಿದ್ದಾರೆ.

 

ರಾತ್ರಿ ಕಾಂಗ್ರೆಸ್ ನ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ರವರು ಮೂವರು ಕಿರಿಯ ಶಾಸಕರ ಜೊತೆ ಸಮಾಲೋಚನೆ ನಡೆಸಿದ್ದಾರೆ ಎನ್ನಲಾಗಿದ್ದು. ಇಂದು ಸಮನ್ವಯ ಸಮಿತಿ ಸಭೆಯಲ್ಲಿ ಭಾಗವಹಿಸುತ್ತಿರುವ ಅವರು ರಾಹುಲ್ ಗಾಂಧಿ ಯವರ ಇಚ್ಛೆಯಂತೆ ಸಚಿವ ಸಂಪುಟ ಹಾಗೂ ಕೆಪಿಸಿಸಿ ಅಧ್ಯಕ್ಷರ ಹುದ್ದೆಗೆ ಯುವ ನಾಯಕರಿಗೆ ಮಣೆ ಹಾಕಲು ಮುಂದಾಗಿದ್ದಾರೆ ಎನ್ನುವ ಹಿನ್ನಲೆಯಲ್ಲಿ ಕಾಂಗ್ರೆಸ್ ನ ಹಿರಿಯ ಅನುಭವಿ ನಾಯಕರು ಬಂಡಾಯ ಎದ್ದಿದ್ದಾರೆ.

ಕಾಂಗ್ರೆಸ್ ಪಕ್ಷದಲ್ಲಿ ಹಿರಿಯರನ್ನು ಮೂಲೆ ಗುಂಪು ಮಾಡುತ್ತಿದ್ದಾರೆ. ಈ ಹಿನ್ನಲೆಯಲ್ಲಿ ನಾಳೆ ನಡೆಯುವ ಅತೃಪ್ತ ಶಾಸಕರ ಈ ಸಭೆ ಮಹತ್ವದ ತೀರ್ಮಾನವನ್ನು ಕೈಗೊಳ್ಳುವ ಸಾಧ್ಯತೆ ಇದೆ.ಹಾಗೂ ಸಚಿವ ಸಂಪುಟವನ್ನು ಶೀಘ್ರದಲ್ಲೇ ವಿಸ್ತರಣೆ ಮಾಡಬೇಕೆಂಬ ಒತ್ತಾಯವನ್ನು ಸಹ ಕಾಂಗ್ರೆಸ್ ನ ಹಿರಿಯ ನಾಯಕರು ಬಿಗಿಯಾಗಿ ಪಟ್ಟು ಹಿಡಿದಿದ್ದಾರೆ. ಎಂ.ಬಿ.ಪಾಟೀಲ್ ನೇತೃತ್ವದಲ್ಲಿ ನಾಳೆ ನಡೆಯುವ ಸಭೆಯಲ್ಲಿ ಯಾವ ತೀರ್ಮಾನ ಹೊರಬರುವುದೋ ಕಾದು ನೋಡಬೇಕಾಗಿದೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here