ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆಯನ್ನು ತಪ್ಪಿಸಲು ಮೆಟ್ರೋ ಸಂಚಾರವನ್ನು ಈಗಾಗಲೇ ಪ್ರಾರಂಭಿಸಿದ್ದು, ಇನ್ನು ಕೆಲವು ಏರಿಯಾಗಳಲ್ಲಿ ಮೆಟ್ರೋ ಸಂಚಾರ ಪ್ರಾರಂಭವಾಗಬೇಕಾಗಿದ್ದು ಇದಕ್ಕೆ ಮೆಟ್ರೋ ಕಾಮಗಾರಿ ಪ್ರಗತಿಯಲ್ಲಿದ್ದು ನಗರದಾದ್ಯಂತ ಹಲವು ಪ್ರದೇಶಗಳಲ್ಲಿ ಟ್ರಾಫಿಕ್ ಸಮಸ್ಯೆ ಎದುರಾಗುತ್ತಿದೆ. ಹೌದು, ಮೆಟ್ರೋ ಕಾಮಗಾರಿ ಹಿನ್ನೆಲೆ ನಗರದ ಹಲವು ಭಾಗಗಳಲ್ಲಿ ಟ್ರಾಫಿಕ್ ಸಮಸ್ಯೆ ಕೂಡ ಉಂಟಾಗಿದೆ. ಈಗ ನೀಲಿ ಮಾರ್ಗದ ಪಿಲ್ಲರ್ ಕೆಲಸ ಶುರುವಾಗಿದ್ದು, ದೇವರಬೀಸನಹಳ್ಳಿ ಬಳಿ ನಿಧಾನಗತಿಯ ಸಂಚಾರ ಇರಲಿದೆ. ದೇವರಬೀಸನಹಳ್ಳಿ ಮೇಲ್ಸೇತುವೆ ಬಳಿ ಮೆಟ್ರೊ ಪಿಲ್ಲರ್ ನಿರ್ಮಾಣ