ಮೈಸೂರು: ವಿಶ್ವ ಬುಡಕಟ್ಟು ದಿನಾಚರಣೆ ದಿನದ ಅಂಗವಾಗಿ ಮೈಸೂರು ಜಿಲ್ಲಾ ಪ್ರವಾಸದಲ್ಲಿರುವ ಪರಿಶಿಷ್ಟ ಪಂಗಡಗಳ ಕಲ್ಯಾಣ, ಯುವ ಸಬಲೀಕರಣ ಹಾಗೂ ಕ್ರೀಡಾ ಮತ್ತು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ನಾಗೇಂದ್ರರವರು ಬುಧವಾರ ಹೆಚ್. ಡಿ ಕೋಟೆ ತಾಲೂಕಿನ ಬಸವನಗಿರಿ ಹಾಡಿಯ ಸರ್ಕಾರಿ ವಾಲ್ಮೀಕಿ ಆಶ್ರಮ ಶಾಲೆ ಭೇಟಿ ನೀಡಿ ಅಲ್ಲಿನ ಶಿಕ್ಷಣದ ವ್ಯವಸ್ಥೆ ಮತ್ತು ಆದಿವಾಸಿ ಮಕ್ಕಳ ಅರೋಗ್ಯ & ಶಿಕ್ಷಣದ ಬಗ್ಗೆ ಇಲಾಖೆಯ ಅಧಿಕಾರಿಗಳಿಂದ ಮಾಹಿತಿ ಪಡೆದರು
ಈ ಸಂಧರ್ಭದಲ್ಲಿ ಹೆಚ್.ಡಿ.ಕೋಟೆ ಕ್ಷೇತ್ರದ ಶಾಸಕರಾದ ಅನಿಲ್ ಚಿಕ್ಕಮಾದು, ಮೈಸೂರು ಜಿಲ್ಲಾಧಿಕಾರಿಗಳಾದ ರಾಜೇಂದ್ರ ಕೆ. ವಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ನಿರ್ದೇಶಕರಾದ ಕಲ್ಲೇಶ್, ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕರಾದ ಪದ್ಮನಾಭ, ಅಲೆಮಾರಿ ಅಭಿವೃದ್ಧಿ ನಿಗಮ ವ್ಯವಸ್ಥಾಪಕರಾದ ಸುರೇಶ್ ರವರು ಹಾಗೂ ಇನ್ನಿತರರು ಉಪಸ್ಥಿತರಿದ್ದರು.
Disclaimer: This Story is auto-aggregated by a Syndicated Feed and has not been Created or Edited By City Big News Staff.