ಹೈದರಾಬಾದ್: ಪಂಚ ರಾಜ್ಯಗಳ ಚುನಾವಣೆಯ ಅಬ್ಬರದ ಪ್ರಚಾರ ಜೋರಾಗಿ ನಡೆಯುತ್ತಿದ್ದು ಕರ್ನಾಟಕ ರಾಜ್ಯದ ಸಚಿವ ಜಮೀರ್ ಅಹ್ಮದ್ ಅವರು ತೆಲಂಗಾಣದಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ಪರವಾಗಿ ಅಬ್ಬರದ ಪ್ರಚಾರವನ್ನು ಕೈಗೊಂಡಿದ್ದಾರೆ.
ಹೌದು, ಕರ್ನಾಟಕದ ವಸತಿ ಸಚಿವ ಜಮೀರ್ ಅಹಮ್ಮದ್ ಖಾನ್ ಅವರು ತೆಲಂಗಾಣ ವಿಧಾನಸಭಾ ಚುನಾವಣೆಯ ಅಖಾಡಕ್ಕಿಳಿದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳ ಪರ ಭರ್ಜರಿ ಕ್ಯಾಂಪೇನ್ ಮಾಡುತ್ತಿರುವ ಜಮೀರ್ ಅಹಮ್ಮದ್ ಖಾನ್, ಹೈದರಾಬಾದ್ನಲ್ಲಿ ನಡೆದ ಚುನಾವಣಾ ಪ್ರಚಾರದ ವೇಳೆ ರಾಜ್ಯ ಕಾಂಗ್ರೆಸ್ನಲ್ಲಿ ಮುಸ್ಲಿಂ ಸಮುದಾಯಕ್ಕೆ ನೀಡಿರುವ ಸ್ಥಾನಮಾನಗಳನ್ನು ಒತ್ತಿ ಒತ್ತಿ ಹೇಳಿದ್ದಾರೆ.
ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಮುಸ್ಲಿಮರು, ಕರ್ನಾಟಕದಲ್ಲಿ ಸ್ಪೀಕರ್ ಹುದ್ದೆಯನ್ನು ಪಡೆದುಕೊಂಡಿದ್ದಾರೆ ಎಂದು ಈ ಸಂದರ್ಭದಲ್ಲಿ ಹೇಳಿದರು.
Disclaimer: This Story is auto-aggregated by a Syndicated Feed and has not been Created or Edited By City Big News Staff.