ಹೃದಯಾಘಾತದಿಂದ ನಿಧನರಾದ ಪೌರಾಡಳಿತ ಸಚಿವ ಸಿ.ಎಸ್​. ಶಿವಳ್ಳಿ ಅವರ ಪುತ್ರಿ ರೂಪಾ ತಂದೆಯನ್ನು ಕಳೆದುಕೊಂಡ ನೋವಿನಲ್ಲೇ ಪರೀಕ್ಷೆಗೆ ಹಾಜರಾಗಿದ್ದಾರೆ. ಸಚಿವ ಶಿವಳ್ಳಿ ಅವರ ಪುತ್ರಿ ಹತ್ತನೇ ತರಗತಿಯಲ್ಲಿ ಓದುತ್ತಿದ್ದು, ತಂದೆಯನ್ನು ಕಳೆದುಕೊಂಡ ದುಖಃದ ನಡುವೆಯೇ ಪರೀಕ್ಷೆಗೆ ಹಾಜರಾಗಿದ್ದಾರೆ. ಶಿವಳ್ಳಿ ಅವರ ಪಾರ್ಥಿವ ಶರೀರ ತಡರಾತ್ರಿ ಸ್ವಗ್ರಾಮ ಯರಗುಪ್ಪಿಗೆ ಆಗಮಿಸಿದ್ದು, ಸಾಯಂಕಾಲದವರೆಗೂ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಸ್ವಗ್ರಾಮ ಯರಗುಪ್ಪಿಯಲ್ಲಿ ಶಿವಳ್ಳಿಯವರ ತಂದೆ-ತಾಯಿ ಸಮಾಧಿ ಪಕ್ಕದಲ್ಲೇ ಸಂಜೆ ಅಂತ್ಯಕ್ರಿಯೆ ನಡೆಯಲಿದೆ. ಸ್ವಗ್ರಾಮದಿಂದ ಪಾರ್ಥಿವ ಶರೀರದ ಮೆರವಣಿಗೆ ಮಾಡಿ, ಅಂತ್ಯಕ್ರಿಯೆಯ ಮುಖ್ಯವೇದಿಕೆಯತ್ತ ತರಲಾಗುತ್ತದೆ. ತೆರೆದ ವಾಹನದಲ್ಲಿ ಪಾರ್ಥಿವ ಶರೀರದ ಮೆರವಣಿಗೆ ನಡೆಸಲಾಗುತ್ತದೆ.

ಸಿ. ಎಸ್ ಶಿವಳ್ಳಿ ಅವರ ಎರಡನೇ ಪುತ್ರಿ ರೂಪಾ ಹುಬ್ಬಳ್ಳಿಯ ಮಂಜುನಾಥ ನಗರದಲ್ಲಿ ಇರುವ ಕೆಎಲ್‍ಈ ಕಾಲೇಜಿ ನಲ್ಲಿ 10ನೇ ತರಗತಿಯಲ್ಲಿ ಓದುತ್ತಿದ್ದಾರೆ. ಇಂದು ರೂಪ ಹುಬ್ಬಳ್ಳಿಯ ಸೆಂಟ್ ಆಂಟೋನಿ ಶಾಲೆಯಲ್ಲಿ 10ನೇ ತರಗತಿ ಪರೀಕ್ಷೆ ಬರೆಯುತ್ತಿದ್ದಾಳೆ. ರೂಪಾ 10ನೇ ತರಗತಿಯ ಸಿಬಿಎಸ್‍ಇ ಇಂಗ್ಲೀಷ್ ಪರೀಕ್ಷೆ ಬರೆಯುತ್ತಿದ್ದಾಳೆ.

ಸಿಎಸ್ ಶಿವಳ್ಳಿ ಅವರು ತೀವ್ರ ಹೃದಯಾಘಾತದಿಂದ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು, ಶುಕ್ರವಾರ ಮಧ್ಯಾಹ್ನ ಮೃತಪಟ್ಟಿದ್ದಾರೆ. ಧಾರವಾಡ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವರು ಕಾರ್ಯಾಚರಣೆ ನಡೆದ ಸ್ಥಳದಲ್ಲೇ ಹಾಜರಿದ್ದು, ಎಲ್ಲಾ ಕಾರ್ಯದ ಉಸ್ತುವಾರಿ ವಹಿಸಿದ್ದರು. ಈ ವೇಳೆಯೇ ಅವರು ಬಳಲಿದ್ದರು ಎಂಬ ಮಾಹಿತಿ ಲಭಿಸಿತು.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here