ದೇಶದಲ್ಲೆಡೆ ಕೊರೊನ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ ಕರ್ನಾಟಕ ರಾಜ್ಯದಲ್ಲಿ ಸಹ ಕೊರೋನಾ ಆತಂಕ ಸೃಷ್ಟಿಸಿದ್ದು  ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ನಾಳೆಯಿಂದ ಕರ್ನಾಟಕ ರಾಜ್ಯದಲ್ಲಿ ಒಂದು ವಾರಗಳ ಕಾಲ ಬಂದ್  ವಾತಾವರಣ ಸಹ ನಿರ್ಮಾಣವಾಗಲಿದ್ದು. ಶಾಲಾ-ಕಾಲೇಜುಗಳು ಚಿತ್ರಮಂದಿರಗಳು, ಮಾಲ್  ಸೇರಿ ಸಾರ್ವಜನಿಕರು ಸೇರುವ ಎಲ್ಲಾ ಕಾರ್ಯಕ್ರಮಗಳನ್ನು ರದ್ದು ಮಾಡುವಂತೆ ಬಿಎಸ್ ಯಡಿಯೂರಪ್ಪ ಆದೇಶಿಸಿದ್ದಾರೆ. ಇನ್ನು ಕೊರೋನಾಸೋಂಕಿತರು  ಚಿಕಿತ್ಸೆ ಪಡೆಯುತ್ತಿರುವ ಬೆಂಗಳೂರಿನ ರಾಜೀವ್ ಗಾಂಧಿ ಆಸ್ಪತ್ರೆಗೆ ಕರ್ನಾಟಕ ರಾಜ್ಯದ ವೈದ್ಯಕೀಯ ಶಿಕ್ಷಣ ಸಚಿವರಾದ ಕೆ ಸುಧಾಕರ್ ಅವರು ಖುದ್ದಾಗಿ

ಭೇಟಿ ನೀಡಿ ಕೊರೋನೋ ಸೋಂಕಿತರ ಚಿಕಿತ್ಸೆಯ ಬಗ್ಗೆ ಮಾಹಿತಿ ಪಡೆದಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೆ ಸುಧಾಕರ್ ಅವರು”ಇಂದು ಬೆಂಗಳೂರಿನ ರಾಜೀವ್ ಗಾಂಧಿ ಎದೆರೋಗಗಳ ಸಂಸ್ಥೆಗೆ ಭೇಟಿ ನೀಡಿ ಕೊರೋನ ಸೋಂಕಿತರ, ಶಂಕಿತರ ಆರೋಗ್ಯ ವಿಚಾರಣೆ ಮಾಡಿದ್ದೇನೆ. ಇದೇ ಸಂದರ್ಭದಲ್ಲಿ ಈ ಆಸ್ಪತ್ರೆಯನ್ನು ಸಂಪೂರ್ಣವಾಗಿ ಕೊರೋನ ಸೋಂಕಿತರ ಚಿಕಿತ್ಸೆಗಾಗಿ ಪ್ರತ್ಯೇಕವಾಗಿಡುವ ಕುರಿತಾಗಿ ಪರಿಶೀಲನೆ ಮಾಡಿದೆ.

ಈ ಆಸ್ಪತ್ರೆಯಲ್ಲಿ ಉತ್ತಮ ನುರಿತ ವೈದ್ಯರಿದ್ದು ಸೋಂಕಿತರು ಶೀಘ್ರ ಗುಣಮುಖ ರಾಗುತ್ತಾರೆಂದು ಭರವಸೆ ನೀಡಿದೆ. ಇಲ್ಲಿನ ಸಿಬ್ಬಂದಿವರ್ಗದವರೊಡನೆ ಸಮಾಲೋಚನೆ ನಡೆಸಿ ಅವರಿಗೆ ನೈತಿಕ ಸ್ಥೈರ್ಯ ತುಂಬಿದ್ದೇನೆ. ಸರ್ಕಾರದ ಸಂಪೂರ್ಣ ಸಹಕಾರ ಇಲ್ಲಿ ಚಿಕಿತ್ಸೆ ನೀಡುವ ಸಿಬ್ಬಂದಿವರ್ಗದವರ ಪರವಾಗಿದ್ದು ಅವರ ಎಲ್ಲಾ ಅಗತ್ಯಗಳಿಗೆ ಸೂಕ್ತವಾಗಿ ಸ್ಪಂದಿಸುತ್ತಿದೆ. ನಂತರ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿ ಜನರು ಆತಂಕಪಡುವ ಅಗತ್ಯವಿಲ್ಲ, ಸರ್ಕಾರ ಸೂಚಿಸಿರುವ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿದರೆ ಸಾಕು ಎಂದು ಹೇಳಿದ್ದೇನೆ ಎಂದು ಹೇಳಿದ್ದಾರೆ.

 

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here