ಕಳೆದ ವಾರಗಳಿಂದ ಉತ್ತರ ಕರ್ನಾಟಕ ಭಾಗ, ಮಲೆನಾಡು ಪ್ರದೇಶ ಹಾಗೂ ಕರಾವಳಿ ಪ್ರದೇಶಗಳಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹ ಉಂಟಾಗಿ ಸಾಕಷ್ಟು ಮಂದಿ ಮನೆಮಠ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಲ್ಲದೇ ಹಲವು ಸಾವು-ನೋವುಗಳು ಕೂಡ ಸಂಭವಿಸಿದೆ.ಈ ಘಟನೆಗೆ ಇಡೀ ಕರ್ನಾಟಕದ ರಾಜ್ಯವೇ ಬೆಚ್ಚಿಬಿದ್ದಿದ್ದು ಸಾಕಷ್ಟು ಮಂದಿ ನೆರೆ ಪೀಡಿತ ಪ್ರದೇಶಗಳಿಗೆ ಪರಿಹಾರವನ್ನು ನೀಡುತ್ತಿದ್ದು, ದಿನನಿತ್ಯದ ಬಳಕೆಯ ವಸ್ತುಗಳು ನೀಡುವ ಮೂಲಕ ರಾಜ್ಯದ ಜನರು ಸ್ಪಂದಿಸುತ್ತಿದ್ದು, ತಮ್ಮ ಕೈಯಲ್ಲಿ ಸಾಧ್ಯವಾದಷ್ಟು ಸಹಾಯ ಮಾಡಿ ಮಾನವೀಯತೆ ಮೆರೆದಿದ್ದಾರೆ.

ಇದೀಗ ಕಳೆದ ತಿಂಗಳು ಸುದ್ದಿಯಲ್ಲಿದ್ದ ಹೊಸಕೋಟೆ ಕ್ಷೇತ್ರದ ಕಾಂಗ್ರೆಸ್​​ ಅನರ್ಹ ಶಾಸಕ ಎಂಟಿಬಿ ನಾಗರಾಜ್ ಅವರು ಉತ್ತರ ಕರ್ನಾಟಕದ ನೆರೆ ಪೀಡಿತ ಪ್ರದೇಶಗಳಿಗೆ ದೊಡ್ಡ ಮೊತ್ತದ ಪರಿಹಾರ ಧನ ನೀಡಿದ್ದಾರೆ.ಮುಖ್ಯಮಂತ್ರಿ ಪರಿಹಾರ ನಿಧಿಗೆ ಎಂಟಿಬಿ ನಾಗರಾಜ್ ಅವರು 1 ಕೋಟಿ ಹಣವನ್ನು ಚೆಕ್​ ನೀಡುವ ಮೂಲಕ ಪರಿಹಾರವನ್ನು ನೀಡಿದ್ದಾರೆ.

ಪ್ರವಾಹದಿಂದಾಗಿ ರಾಜ್ಯದಲ್ಲಿ ರೈತರ ಬೆಳೆ ನಾಶ, ಜಾನುವಾರುಗಳು, ಮನೆ, ಸಾವು ನೋವು ಮತ್ತಿತರ ಸಮಸ್ಯೆಯಿಂದ ಎದುರಿಸುತ್ತಿರುವವರಿಗೆ ನೆರೆವಾಗಲಿ ಎಂಬ ಕಾರಣಕ್ಕೆ ಪರಿಹಾರವನ್ನು ಕೊಟ್ಟಿರುವುದಾಗಿ ಅನರ್ಹ ಶಾಶಕ mtb ನಾಗರಾಜ್ ತಿಳಿಸಿದ್ದಾರೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here