ರಾಜ್ಯದಲ್ಲಿ ರಾಜೀನಾಮೆ ನೀಡಿ ಮೈತ್ರಿ ಸರ್ಕಾರದ ಪತನಕ್ಕೆ ಕಾರಣವಾದ ಅನರ್ಹ ಶಾಸಕರ ಕ್ಷೇತ್ರಗಳಲ್ಲಿ ಉಪಚುನಾವಣೆಗೆ ಕಣ ಸಿದ್ಧವಾಗಿದೆ. ಬಹಳ ಜೋರಾಗಿ ಉಪ ಚುನಾವಣೆಯ ಸಿದ್ಧತೆಗಳು ಕೂಡಾ ನಡೆದಿವೆ. ಇನ್ನು ಇಂದು ಅನರ್ಹ ಶಾಸಕರು ತಮ್ಮ ಅನರ್ಹತೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮುಂದೆ ಸಲ್ಲಿಸಿದ್ದ ಮನವಿಗೆ ಓಗೊಟ್ಟ ಸುಪ್ರೀಂ ಕೋರ್ಟ್ ಶಾಸಕರ ಅನರ್ಹತೆಯ ವಿಷಯದಲ್ಲಿ ಇಂದು ತನ್ನ ತೀರ್ಪನ್ನು ಪ್ರಕಟಣೆ ಮಾಡಿದೆ. ಶಾಸಕರ ಅನರ್ಹತೆಯನ್ನು ಎತ್ತಿ ಹಿಡಿದ ಸುಪ್ರೀಂ ಕೋರ್ಟ್ ಇದೇ ಸಮಯದಲ್ಲಿ ಅವರು ಉಪಚುನಾವಣೆಗೆ ಸ್ಪರ್ಧಿಸಬಹುದು ಎಂದು ಹೇಳಿದೆ.

ಈಗಾಗಲೇ ಉಪಚುನಾವಣೆಯೆ ಕ್ಷೇತ್ರಗಳು ಚುನಾವಣೆಗೆ ಸಿದ್ಧವಾಗಿರುವಾಗಲೇ, ಮಾಜಿ ಸಿಎಂ ಕುಮಾರಸ್ವಾಮಿ ಅವರು ಹೇಳಿಕೆಯೊಂದನ್ನು ನೀಡಿದ್ದು, ಹೊಸಕೋಟೆಯಲ್ಲಿ ಎಂಟಿಬಿ ನಾಗರಾಜ್ ವಿರುದ್ಧ ಶರತ್ ಬಚ್ಚೇಗೌಡ ಸ್ಪರ್ಧೆ ಮಾಡಿದರೆ ಅವರಿಗೆ ಜೆಡಿಎಸ್​ ತನ್ನ ಬೆಂಬಲವನ್ನು ನೀಡಲಿದೆ ಎಂದು ಹೇಳಿದ್ದಾರೆ. ಮಾಜಿ ಸಿಎಂ ಅವರು ಮಾದ್ಯಮಗಳ ಮುಂದೆ ಮಾತನಾಡುತ್ತಾ ಶರತ್ ಬಚ್ಚೇಗೌಡ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣಾ ಕಣಕ್ಕಿಳಿದರೆ ನಾವು ಬೆಂಬಲ ನೀಡುತ್ತೇವೆ ಎಂದಿದ್ದಾರೆ.‌

ಶರತ್ ಬಚ್ಚೇಗೌಡ ಅವರು ನಮ್ಮನ್ನು ಬೆಂಬಲ ಕೇಳಿದರೆ, ನಾವು ಖಂಡಿತ ಇಲ್ಲ ಎಂದು ಹೇಳುವುದಿಲ್ಲ ಎಂದಿರುವ ಕುಮಾರಸ್ವಾಮಿ ಅವರು ಬೆಂಬಲ ನೀಡುವುದು ಮಾತ್ರವೇ ಅಲ್ಲದೆ, ನಾವು ಹೊಸಕೋಟೆಗೆ ಜೆಡಿಎಸ್​ ಅಭ್ಯರ್ಥಿಯನ್ನ ಹಾಕುವುದಿಲ್ಲ ಎಂದು ಕೂಡಾ ತಿಳಿಸಿದ್ದಾರೆ. ಶರತ್ ಬಚ್ಚೇಗೌಡ ಎಲ್ಲರೂ ನಮ್ಮವರೇ. ಅವರ ಮೂಲ ಇದ್ದಿದ್ದು ಇಲ್ಲೇ ಅಲ್ಲವೇ? ಎಂದು ಹೇಳುತ್ತಾ, ಹಳೆಯ ಮನೆಗೆ ಅವರು ಬರಬಹುದು ಎಂದಿದ್ದಾರೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here