ಬಿಜೆಪಿ ನೂತನ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ ಕೂಡಲೇ ಅವರಿಗೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ನಾಯಕರು ಅದ್ದೂರಿಯಾದ ಸ್ವಾಗತವನ್ನು ಕೋರಿದ್ದಾರೆ‌. ಈ ಸಂದರ್ಭದಲ್ಲಿ ಸಂಸದರಾದ ಬಿ.ಎನ್ ಬಚ್ಚೇಗೌಡ, ಮುನಿಸ್ವಾಮಿ, ಪ್ರತಾಪ ಸಿಂಹ, ಶಾಸಕರಾದ ಅಂಗಾರ, ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್ ಸೇರಿದಂತೆ ಬಿಜೆಪಿ ಕಾರ್ಯಕರ್ತರು ನೇರವಾಗಿ ವಿಮಾನ ನಿಲ್ದಾಣಕ್ಕೆ ಆಗಮಿಸಿ ರಾಜ್ಯಾಧ್ಯಕ್ಷರನ್ನು ಬರಮಾಡಿಕೊಂಡಿದ್ದಾರೆ. ಅವರ ಸ್ವಾಗತಕ್ಕಾಗಿ ವೀರಗಾಸೆ, ಡೊಳ್ಳು ಕುಣಿತ ಕೂಡಾ ವ್ಯವಸ್ಥೆ ಮಾಡಲಾಗಿತ್ತು.

ವಿಮಾನ ನಿಲ್ದಾಣದ ಬಳಿ ಬಿಜೆಪಿ ಮಯವಾಗಿತ್ತೆಂದರೂ ಸರಿಯೇ ಎನ್ನುವಂತಿತ್ತು. ನಳಿನ್ ಕುಮಾರ್ ಕಟೀಲ್ ಅವರಿಗೆ ಬಿಜೆಪಿ ಮಹಿಳಾ ಕಾರ್ಯಕರ್ತರು ಅವರಿಗೆ ಸಾಂಪ್ರದಾಯಿಕವಾಗಿ ಆರತಿ ಬೆಳಗಿ ಪ್ರೀತಿಯಿಂದ ಸ್ವಾಗತಿಸಿದರು. ತೆರೆದ ವಾಹನದಲ್ಲಿ ನಳಿನ್ ಕುಮಾರ್ ಅವರು ಮೆರವಣಿಗೆ ನಡೆಸಲಾಗಿತ್ತು.ನೂತನ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರ ಪದಗ್ರಹಣ ಸಮಾರಂಭ ಬೆಳಗ್ಗೆ ರಾಜ್ಯ ಬಿಜೆಪಿ ಕಾರ್ಯಾಲಯದಲ್ಲಿ ನಡೆಯಿತು. ರಾಜ್ಯಾಧಕ್ಷರಾಗಿ ಈಗ ಸಿಎಂ ಆಗಿರುವ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರವನ್ನು ನೂತನ ರಾಜ್ಯಾಧ್ಯಕ್ಷರಿಗೆ ಹಸ್ತಾಂತರ ಮಾಡಿದ್ದಾರೆ.

ನಳಿನ್ ಕುಮಾರ್ ಕಟೀಲ್ ಅವರು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಇದು ಮೂರನೇ ಬಾರಿ ಆಯ್ಕೆಯಾಗಿದ್ದಾರೆ. ಅವರು 12 ವರ್ಷಗಳ ಸುದೀರ್ಘ ಸಮಯವನ್ನು ಆರ್.ಎಸ್‍.ಎಸ್‍ ಪೂರ್ಣಾವಧಿ ಪ್ರಚಾರಕರಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಭಾನುವಾರವೇ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಬೇಕಿತ್ತು. ಕೇಂದ್ರದ ಮಾಜಿ ಸಚಿವ ಅರುಣ್ ಜೇಟ್ಲಿ ನಿಧನದಿಂದ ಅವರ ಅಧಿಕಾರ ಸ್ವೀಕಾರ ಕಾರ್ಯಕ್ರಮವನ್ನು ಮುಂದೂಡಲಾಗಿತ್ತು. ಆ ಕಾರ್ಯಕ್ರಮ ಇಂದು ನಡೆದಿದೆ.

BJP Karnataka यांनी वर पोस्ट केले सोमवार, २६ ऑगस्ट, २०१९

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here