ಕರ್ನಾಟಕ ರಾಜ್ಯದಲ್ಲಿ ಎಷ್ಟು ಜಿಲ್ಲೆಗಳಿವೆ ? ಈ ಪ್ರಶ್ನೆ ಈಗ ಏಕೆ ಎನ್ನುವುದಾದರೆ, ರಾಜ್ಯ ಬಿಜೆಪಿ ಅಧ್ಯಕ್ಷರು ಈ ವಿಷಯವಾಗಿ ಮಾತನಾಡುತ್ತಾ, ಹೇಳಿರುವ ಒಂದು ತಪ್ಪು ಈಗ ವಿರೋಧಿಗಳಿಗೆ ಟೀಕೆ ಮಾಡಲು ಸಾಕಷ್ಟು ವಿಷಯವನ್ನು ನೀಡುವಂತೆ ಆಗಿರುವುದು ಮಾತ್ರವಲ್ಲದೇ, ಬಿಜೆಪಿ ರಾಜ್ಯಾಧ್ಯಕ್ಷರಿಗೆ ರಾಜ್ಯದಲ್ಲಿ ಎಷ್ಟು ಜಿಲ್ಲೆಗಳಿವೆ ಎಂಬ ಪ್ರಶ್ನೆಗೆ ನಿಖರವಾದ ಉತ್ತರವು ಗೊತ್ತಿಲ್ಲವೇ? ಎಂಬ ಪ್ರಶ್ನೆಯೊಂದು ಈಗ ಎದುರಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರು ಮಾತನಾಡುತ್ತಾ ನಮ್ಮ ರಾಜ್ಯದಲ್ಲಿ 32 ಜಿಲ್ಲೆಗಳಿವೆ ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸುವುದರ ಜೊತೆಗೆ ಟೀಕೆಗೆ ಕೂಡಾ ಗುರಿಯಾಗಿದ್ದಾರೆ.

ಕರ್ನಾಟಕ ರಾಜ್ಯದಲ್ಲಿ ಪ್ರಸ್ತುತ 30 ಜಿಲ್ಲೆಗಳಿವೆ. ಆದರೆ ಯಾದಗಿರಿ ನಗರದ ಸರ್ಕಿಟ್ ಹೌಸ್ ನಲ್ಲಿ ಬಿಜೆಪಿಯ ರಾಜ್ಯಾಧ್ಯಕ್ಷರಾದಂತಹ ಮಾನ್ಯ ನಳೀನ್ ಕುಮಾರ್ ಕಟೀಲು ಅವರು ಮಾಧ್ಯಮದವರೊಂದಿಗೆ ಮಾತನಾಡುವ ವೇಳೆಯಲ್ಲಿ, ರಾಜ್ಯದಲ್ಲಿ 32 ಜಿಲ್ಲೆಗಳಿವೆ ಎಂದು ಹೇಳಿದ್ದಾರೆ. ಅವರು ಇಂತಹ ಹೇಳಿಕೆ ನೀಡಿದ ನಂತರ ಕರ್ನಾಟಕ ಕಾಂಗ್ರೆಸ್ ಒಂದು ಟ್ವೀಟ್ ಮಾಡುವು ಮೂಲಕ ನಳೀನ್ ಕುಮಾರ್ ಕಟೀಲು ಅವರ ಕಾಲೆಳೆಯುವ ಪ್ರಯತ್ನವನ್ನು ಕೂಡಾ ಮಾಡಿದೆ. ರಾಜ್ಯ ಕಾಂಗ್ರೆಸ್ ತನ್ನ ಟ್ವೀಟ್ ನಲ್ಲಿ ನಳಿನ್ ಕುಮಾರ್ ಕಟೀಲ್ ಅವರೇ, ರಾಜ್ಯದಲ್ಲಿ 32 ಜಿಲ್ಲೆಗಳಾ? ಎಂದು ಪ್ರಶ್ನಿಸಿದೆ.

ನಂತರ ಅದೇ ಟ್ವೀಟ್ ನಲ್ಲಿ ರಾಜ್ಯದಲ್ಲೆಷ್ಟು ಜಿಲ್ಲೆಗಳಿವೆ? ಎಂಬ ಕನಿಷ್ಠ ಜ್ಞಾನವೂ ಇಲ್ಲದ ನೀವು ರಾಜ್ಯವನ್ನು ಲೋಕಸಭೆಯಲ್ಲಿ ಪ್ರತಿನಿಧಿಸುತ್ತಿರುವಿರಿ ಮತ್ತು ಬಿಜೆಪಿ ಕರ್ನಾಟಕದ ಅಧ್ಯಕ್ಷರಾಗಿರುವಿರಿ, ಪ್ರಾಥಮಿಕ ಶಾಲೆಯ ಪಠ್ಯ ಪುಸ್ತಕವನ್ನು ಒಮ್ಮೆ ಕೊಂಡು ಓದಿ, ಕನಿಷ್ಠವಾದರೂ ಸಾಮಾನ್ಯ ಜ್ಞಾನ ವೃದ್ಧಿಸಿಕೊಳ್ಳಿರಿ ಎಂದು ಟ್ವೀಟ್ ಮಾಡುವ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷರಿಗೆ ಟಾಂಗ್ ನೀಡಿ, ಅವರು ಮಾಡಿರುವ ತಪ್ಪನ್ನು ವ್ಯಂಗ್ಯವಾಡಿದೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here