ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದಾದ ಸಂದರ್ಭ ಲೋಕಸಭೆಯಲ್ಲಿ ತನ್ನ ಅದ್ಭುತ ಭಾಷಣದಿಂದ ದೇಶದ ಗಮನ ಸೆಳೆದಿದ್ದ ಲಡಾಕ್ ಸಂಸದ ಜಮ್ಯಾಂಗ್ ಸೆರಿಂಗ್ ನಂಗ್ಯಾಲ್ ಇದೀಗ ಮತ್ತೆ ಸುದ್ದಿಯಲ್ಲಿದ್ದಾರೆ. ಕರ್ನಾಟಕದಿಂದ ಲೋಕಸಭೆಗೆ ಆಯ್ಕೆಯಾಗಿರುವ ಏಕೈಕ ಕಾಂಗ್ರೆಸ್ ಸಂಸದ ಡಿ.ಕೆ ಸುರೇಶ್ ಅವರನ್ನು ನಂಗ್ಯಾಲ್ ಅವರು ಬಿಜೆಪಿಗೆ ಸೇರಿಕೊಳ್ಳಿ ಎಂದು ಆಹ್ವಾನಿಸಿದ್ದಾರೆ.ವಿಶೇಷ ಎಂದರೆ ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ dk suresh bjp serikolli ಎಂದು ಕನ್ನಡದಲ್ಲೇ ಬರೆದುಕೊಂಡಿದ್ದಾರೆ.

ಲೋಕಸಭೆಯಲ್ಲಿ ಅಧಿವೇಶನದ ಬಿಡುವಿನ ವೇಳೆಯಲ್ಲಿ ಕರ್ನಾಟಕದ ಸಂಸದರಾದ ಪ್ರತಾಪ್ ಸಿಂಹ, ತೇಜಸ್ವಿ ಯಾದವ್ ಮತ್ತು ಡಿ.ಕೆ ಸುರೇಶ್ ಜೊತೆಗೆ ಜಮ್ಯಾಂಗ್ ಸೆರಿಂಗ್ ನಂಗ್ಯಾಲ್ ಸೇರಿ ಚರ್ಚಿಸುತ್ತಿದ್ದರು.

ಈ ಬಗ್ಗೆ ಟ್ವಿಟ್ಟರ್‌ನಲ್ಲಿ ನಂಗ್ಯಾಲ್ ಅಭಿಪ್ರಾಯ ಹಂಚಿಕೊಂಡಿದ್ದು, ಮೂವರು ಕನ್ನಡಿಗರು ನನಗೆ ಕನ್ನಡ ಕಲಿಸಲು ಪ್ರಯತ್ನಿಸುತ್ತಿದ್ದಾರೆ. ಡಿ.ಕೆ.ಸುರೇಶ್ ಅವರಿಗೆ ನಾನು ಬಿಜೆಪಿ ಸೇರಿಕೊಳ್ಳಿ ಎಂದು ಹೇಳಿದೆ ಎಂದು ನಂಗ್ಯಾಲ್ ಟ್ವಿಟ್ಟರ್‌ನಲ್ಲಿ ಸೆಲ್ಫಿ ಫೋಟೊದೊಂದಿಗೆ ಶೇರ್ ಮಾಡಿದ್ದಾರೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here