ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಇಂದು ಶ್ರೀಕಂಠೇಶ್ವರ ಸ್ವಾಮಿಯ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ನಡೆಯುತ್ತಿದೆ. ರಾಜ್ಯದ ಮೂಲೆ ಮೂಲೆಗಳಿಂದ ಶ್ರೀಕಂಠೇಶ್ವರ ಸ್ಬಾಮಿಯ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ

ನಂಜನಗೂಡು ರಥೋತ್ಸವಕ್ಕೆ ಭಕ್ತರು ಬಂದು ಪಾಲ್ಗೊಂಡರು.ಅದ್ದೂರಿಯಾಗಿ ನಡೆಯುತ್ತಿರುವ ಜಾತ್ರೆಯ ನೋಡಲು ನಂಜುಂಡೇಶ್ವರನ ಸನ್ನಿಧಿಯಲ್ಲಿ ಭಕ್ತರ ಸಾಗರವೇ ನೆರದಿದೆ.ಇಂದು ಮುಂಜಾನೆಯೇ ಆರಂಭವಾದ ರಥೋತ್ಸವದ ವೇಳೆ ಭಕ್ತರ ಸಮ್ಮುಖದಲ್ಲಿ ತೇರನ್ನು ಎಳೆಯಲಾಯಿತು.

ಪ್ರತಿವರ್ಷ ನಡೆಯುವ ಜಾತ್ರೆಯಲ್ಲಿ ರಥೋತ್ಸವದಲ್ಲಿ ಶ್ರೀಕಠೇಶ್ವರ ಸ್ವಾಮಿಯನ್ನು ಅಲಂಕರಿಸಿ ಸಕಲ ಪೂಜೆಯೊಂದಿಗೆ ಮೆರವಣಿಗೆ ಮಾಡಲಾಗುತ್ತದೆ.ರಥೋತ್ಸವದ ಸಂದರ್ಭದಲ್ಲಿ ಭಕ್ತರ ಜೈಕಾರ ಮುಗಿಲುಮುಟ್ಟಿತ್ತು.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here