ಕೇಂದ್ರ ಆರ್ಥಿಕ ಸಚಿವರಾಗಿದ್ದ ಅರುಣ್ ಜೇಟ್ಲಿ ಅವರು ದೀರ್ಘಾವಧಿಯಿಂದ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ವಿಷಯ ತಿಳಿದಿದೆ‌. ಅವರು ಈಗ ರಚನೆಯಾಗುತ್ತಿರುವ ಹೊಸ ಸಚಿವ ಸಂಪುಟದಲ್ಲಿ ತಮಗೆ ಯಾವುದೇ ಜವಾಬ್ದಾರಿ ನೀಡಬೇಡಿ ಎಂದವರು ಪ್ರಧಾನಿ ನರೇಂದ್ರ ಮೋದಿ ಬಳಿ ಮನವಿಯೊಂದನ್ನು ಮಾಡಿಕೊಂಡಿದ್ದಾರೆ. ಅವರು ತಮ್ಮ ನಿರ್ಧಾರವನ್ನು ಕುರಿತಾಗಿ ಸ್ಪಷ್ಟವಾಗಿ ತಿಳಿಸುತ್ತಾ ಪತ್ರವೊಂದನ್ನು ಬರೆದಿರುವ ಅರುಣ್ ಜೇಟ್ಲಿಯವರು, ಕೇಂದ್ರದಲ್ಲಿ ಪ್ರತಿ ಬಾರಿ ಎನ್‍ಡಿಎ ಸರ್ಕಾರ ಬಂದಾಗಲೂ ನಾನು ಸಚಿವನಾಗಿದ್ದು, ನನಗೆ ಈ ಅವಕಾಶ ಮಾಡಿಕೊಟ್ಟಿದ್ದಕ್ಕೆ ಬಿಜೆಪಿ ನಾಯಕರಿಗೆ ಧನ್ಯವಾದಗಳು ಎಂದು ಬರೆದಿದ್ದಾರೆ.

ಧನ್ಯವಾದಗಳು ತಿಳಿಸಿದ ನಂತರ ಅವರು, ಈ ಬಾರಿ ತಮ್ಮ ಅನಾರೋಗ್ಯದ ಕಾರಣದಿಂದಾಗಿ ವಿಶ್ರಾಂತಿಯು ಅಗತ್ಯವಿದ್ದು, ಸಂಪುಟ ಸೇರಲು ಆಗುವುದಿಲ್ಲವೆಂದು ತಮ್ಮ ಅಸಹಾಯಕತೆಯನ್ನು ವ್ಯಕ್ತಪಡಿಸಿದ್ದಾರೆ. ಅವರು ಪತ್ರದಲ್ಲಿ , ಎನ್.ಡಿ.ಎ. ಸರ್ಕಾರದ ಅವಧಿಯಲ್ಲಿ 5 ವರ್ಷ ಸಚಿವನಾಗಿ ಕಾರ್ಯನಿರ್ವಹಿಸಿರುವುದು ಹೆಮ್ಮೆಯ ಸಂಗತಿಯಾಗಿದೆ. ಈ ಹಿಂದೆಯೂ ಎನ್‍ಡಿಎ ಸರ್ಕಾರದ ಅವಧಿಯಲ್ಲಿ ಸಚಿವನಾಗಿದ್ದೆ. ಇನ್ನು ಹೆಚ್ಚಿನ ನಿರೀಕ್ಷೆಯನ್ನು ತಾನು ಮಾಡುತ್ತಿಲ್ಲ ಎಂದು ಅವರು ಬರೆದಿದ್ದಾರೆ.

ಸುಮಾರು 9 ತಿಂಗಳುಗಳಿಂದ ಉಂಟಾಗಿರುವ ಅನಾರೋಗ್ಯದಿಂದಾಗಿ, ಚುನಾವಣೆಯ ಪ್ರಚಾರ ಮುಗಿದ ಬಳಿಕ ಮೌಖಿಕವಾಗಿ ತಮ್ಮ ನಿರ್ಧಾರವನ್ನು ತಿಳಿಸಿದ್ದ ಅವರು, ಈಗ ಪತ್ರ ಮುಖೇನ ಮನವಿ ಮಾಡಿಕೊಂಡಿದ್ದಾರೆ. ಅನಾರೋಗ್ಯದಿಂದಾಗಿ ಸರ್ಕಾರದಲ್ಲಿ ಕೆಲಸ ಮಾಡುವುದು ಕಷ್ಟವಾಗುತ್ತದೆ ಎಂಬುದು ಅವರ ಅಭಿಪ್ರಾಯವಾಗಿದೆ. ಆದ್ದರಿಂದಲೇ ಈಗ ಅಧಿಕೃತವಾಗಿ ಅವರು ತಮ್ಮ ಮನವಿಯನ್ನು ಪ್ರಧಾ‌ನಿ ನರೇಂದ್ರ ಮೋದಿಯವರಿಗೆ ಲಿಖಿತವಾಗಿ ನೀಡಿದ್ದಾರೆ‌.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here