ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು 69ನೇ ವಸಂತಕ್ಕೆ ಕಾಲಿಟ್ಟಿದ್ದು, ಹುಟ್ಟುಹಬ್ಬದ ಹಿನ್ನಲೆಯಲ್ಲಿ ಗುಜರಾತ್ ರಾಜ್ಯದ ಕೇವಡಿಯಾ ಜಿಲ್ಲೆಯಲ್ಲಿರುವ ಸರ್ದಾರ್ ಸರೋವರ ಅಣೆಕಟ್ಟು ಪ್ರದೇಶಕ್ಕೆ ಭೇಟಿ ನೀಡಿ, ಆರತಿ ಬೆಳಗಿದ್ದಾರೆ.
ಅಣೆಕಟ್ಟು ಪ್ರದೇಶಕ್ಕೆ ಭೇಟಿ ನೀಡಿದ ವೇಳೆ ಪ್ರಧಾನಿ ಮೋದಿಯವರು ಬಣ್ಣ, ಬಣ್ಣದ ಚಿಟ್ಟೆಗಳನ್ನು ಹಾರಿಸುವ ಮೂಲಕ ಸಂಭ್ರಮಿಸಿದರು. ಬಳಿಕ ಸರ್ದಾರ್ ಸರೋವರ ಅಣೆಕಟ್ಟನ್ನು ವೀಕ್ಷಣೆ ಮಾಡಿದರು.

ಹೆಲಿಕಾಪ್ಟರ್ ನಲ್ಲಿ ಅಣೆಕಟ್ಟನ್ನು ವೀಕ್ಷಣೆ ಮಾಡಿದ ಮೋದಿಯವರು, ಸರ್ದಾರ್ ಪಟೇಲರ ಪ್ರತಿಮೆಯನ್ನು ಕ್ಯಾಮೆರಾದಲ್ಲಿ ಸೆರೆ ಹಿಡಿದು, ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಶೇರ್ ಮಾಡಿದ್ದಾರೆ.  ಅಣೆಕಟ್ಟಿನ ವೀಕ್ಷಣೆ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತಿನ ತಮ್ಮ ನಿವಾಸಕ್ಕೆ ತೆರಳಿ ಅಮ್ಮನ ಜೊತೆಗೆ ಊಟ ಮಾಡಿದರು. ಅಮ್ಮನ ಆಶೀರ್ವಾದ ಪಡೆದರು. ಕೆಲ ಕಾಲ ತಾಯಿಯ ಜೊತೆಗೆ ಉಭಯಕುಶಲೋಪರಿ ನಡೆಸಿದರು.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here