ಪ್ರಧಾನಿ ನರೇಂದ್ರ ಮೋದಿಯವರಿಗೆ ಒಲಿದು ಬಂದಿದೆ ಮತ್ತೊಂದು ಅಂತರರಾಷ್ಟ್ರೀಯ ಮಟ್ಟದ ಪ್ರಶಸ್ತಿ. ರಷ್ಯನ್ ಒಕ್ಕೂಟದ ಅತ್ಯುನ್ನತ ಪ್ರಶಸ್ತಿಯಾದ ಆರ್ಡರ್ ಆಫ್ ಸೇಂಟ್ ಆಂಡ್ರ್ಯೂ ದಿ ಅಪೋಸ್ಲೆಲ್ ಪ್ರಶಸ್ತಿಯನ್ನು ನೀಡುವ ಮೂಲಕ ಭಾರತ ಮತ್ತು ರಷ್ಯಾ ನಡುವಿನ ಉತ್ತಮ ಬಾಂಧವ್ಯ ಹಾಗೂ ಎರಡು ರಾಷ್ಟ್ರಗಳ ನಡುವಿನ ಸಹಭಾಗಿತ್ವ ಮತ್ತು ಸ್ನೇಹ ಸಂಬಂಧಗಳನ್ನು ಉತ್ತೇಜಿಸಲು ಶುಕ್ರವಾರ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ರಷ್ಯಾ ಘೋಷಿಸಿದೆ. ಭಾರತದ ಪ್ರಧಾನಿಯಾಗಿ ಅವರಿಗೆ ಸಿಕ್ಕಿರುವ ಈ ಗೌರವ , ಭಾರತಕ್ಕೆ ಸಿಕ್ಕ ಗೌರವ ಎಂದೇ ನಾವು ಹೇಳಬಹುದಾಗಿದೆ.

ರಷ್ಯಾ ಮತ್ತು ಭಾರತ ನಡುವಿನ ವಿಶೇಷ ಮತ್ತು ಸುಯೋಗದ ಆಯಕಟ್ಟಿನ ಪಾಲುದಾರಿಕೆಯನ್ನು ಉತ್ತೇಜಿಸುವಲ್ಲಿ ನರೇಂದ್ರಮೋದಿ ಅವರ ಅಸಾಧಾರಣ ಸೇವೆಗಳಿಗಾಗಿ ಆರ್ಡರ್ ಆಫ್ ಸೇಂಟ್ ಆಂಡ್ರ್ಯೂ ದಿ ಅಪೋಸ್ಟೆಲ್ ಪ್ರಶಸ್ತಿಯನ್ನು ಅವರಿಗೆ ನೀಡಿ ಗೌರವಿಸಲಾಗುತ್ತಿದೆ ಹಾಗೂ ರಷ್ಯಾದ ಮತ್ತು ಭಾರತೀಯ ಜನರ ನಡುವಿನ ಸ್ನೇಹ ಸಂಬಂಧಗಳು ಮತ್ತಷ್ಟು ಬಲಗೊಳ್ಳಲು ಇದು ನೆರವು ನೀಡಲಿದೆ ಎಂದು ಭಾರತದಲ್ಲಿರುವ ರಷ್ಯಾದ ದೂತಾವಾಸವು ಟ್ವೀಟ್ ಮಾಡಿದೆ.

ದ್ವಿಪಕ್ಷೀಯ ಸಂಬಂಧಗಳನ್ನು ಉತ್ತೇಜಿಸಲು ಮೋದಿಗೆ ಈ ತಿಂಗಳ ಆರಂಭದಲ್ಲಿ ಯುನೈಟೆಡ್ ಅರಬ್ ಎಮಿರೇಟ್ಸ್ನ ಅತ್ಯುನ್ನತ ನಾಗರಿಕ ಪ್ರಶಸ್ತಿ ಆರ್ಡರ್ ಆಫ್ ಜಾಯೆದ್ ಪ್ರಶಸ್ತಿಯನ್ನು ನೀಡಲಾಗಿದ್ದನ್ನು ನಾವಿಲ್ಲಿ ಸ್ಮರಿಸಬಹುದು. ಅವರು ಈಗಾಗಲೇ ಸೌದಿ ಅರೇಬಿಯಾದ ಅತ್ಯುನ್ನತ ನಾಗರಿಕ ಗೌರವವನ್ನು ಹೊಂದಿದ್ದರು. ಅದರ ಬೆನ್ನಲ್ಲೇ ಈಗ ರಷ್ಯಾ ಅವರಿಗೆ ಇನ್ನೊಂದು ಪ್ರಶಸ್ತಿಯನ್ನು ನೀಡಿ ಗೌರವ ನೀಡಿರುವುದು ನಿಜಕ್ಕೂ ಒಂದು ಹೆಮ್ಮೆಯ ವಿಷಯವಾಗಿದೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here