ಪ್ರಧಾನಿ ನರೇಂದ್ರ ಮೋದಿ ಅವರು ದೇಶವನ್ನು ಉಳಿಸಬೇಕಾದರೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸಲಹೆ ಪಡೆದುಕೊಂಡರೆ ಮಾತ್ರ ಸಾಧ್ಯ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿಕೆಯೊಂದನ್ನು ನೀಡಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡದಲ್ಲಿ ಇಂದು ನಡೆದಂತಹ ಸಮಾವೇಶವೊಂದರಲ್ಲಿ ಮಾತನಾಡಿದ ದಿನೇಶ್ ಗುಂಡೂರಾವ್ ಅವರು ಕೇಂದ್ರ ಈ ಹಿಂದೆ ಜಾರಿಗೆ ತಂದಂತಹ ಜಿಎಸ್‌ಟಿಯಿಂದಾಗಿ ದೇಶ ಸಂಕಷ್ಟಕ್ಕೆ ಗುರಿಯಾಗಿದೆ‌. ಈ ಸಂಕಷ್ಟದಿಂದ ದೇಶವನ್ನು ರಕ್ಷಿಸಿ, ಆರ್ಥಿಕತೆಯನ್ನು ಸುಧಾರಿಸಲು ಮೋದಿ ಅವರು ಮನಮೋಹನ್ ಸಿಂಗ್ ಅವರ ಸಲಹೆ ಪಡೆಯಬೇಕು ಎಂದಿದ್ದಾರೆ.

ನರೇಂದ್ರ ಮೋದಿ ಅವರು ಕೇವಲ ಶೋ ಮಾಡಿಕೊಂಡು ಕಾಲ ಕಳೆಯುತ್ತಿದ್ದು . ಮಾದ್ಯಮದವರು ಕೂಡಾ ಮೋದಿಯನ್ನು ಕಂಡರೆ ಭಯಪಡುವರು. ಆದ್ದರಿಂದಲೇ ಮೋದಿ ವಿರುದ್ಧ ಮಾದ್ಯಮಗಳಲ್ಲಿ ಕೂಡಾ ಸುದ್ದಿಗಳು ಪ್ರಸಾರವಾಗುವುದಿಲ್ಲ ಎಂದು ದಿನೇಶ್ ಗಂಡೂರಾವ್ ಅವರ ತಮ್ಮ ಅಸಮಾಧಾನವನ್ನು ಹೊರ ಹಾಕಿದ್ದಾರೆ. ಇದೇ ಸಂದರ್ಭದಲ್ಲಿ ಅವರು ಬಿಜೆಪಿ ಸಂಸದ ಅನಂತಕುಮಾರ ಹೆಗಡೆ ಅವರ ಬಗ್ಗೆ ಮಾತನಾಡುತ್ತಾ, ಅವರು ಬೆಂಕಿ ಹಚ್ಚುವ ಕೆಲಸಮಾಡಿದ್ದರು. ಆದ್ದರಿಂದಲೇ ಚುನಾವಣೆಯ ನಂತರ ಅವರನ್ನು ಬಿಜೆಪಿಯವರೇ ದೂರ ಇಟ್ಟಿದ್ದಾರೆ ಎಂದು ಹೇಳಿದ್ದಾರೆ.

ಕೇಂದ್ರ ಆರ್ಥಿಕ ನೀತಿಯ ವಿರುದ್ಧ ಇಂದು ಜನಾಂದೋಲನ ಹಾಗೂ ಕಾರ್ಯಕರ್ತರ ಸಮಾವೇಶಕ್ಕೆ ಚಾಲನೆ ನೀಡಲಾಗಿದ್ದು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಂಡಗೋಡಿನ ತಾಲೂಕು ಕ್ರೀಡಾಂಗಣದಲ್ಲಿ ಈ ಸಮಾವೇಶಕ್ಕೆ ಚಾಲನೆಯನ್ನು ನೀಡಿದ್ದು, ಉಪ ಚುನಾವಣೆಯೆ ಹಿನ್ನೆಲೆಯಲ್ಲಿ ಪಕ್ಷವನ್ನು ಸಂಘಟನೆ ಮಾಡುವ ಉದ್ದೇಶದಿಂದ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎನ್ನಲಾಗಿದ್ದು, ಮಾಜಿ ಸಿಎಂ ಅವರ ಆಗಮನದಿಂದ ಅದಕ್ಕೊಂದು ಕಳೆ ಬಂದಿದೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here