ಪೌರತ್ವ ತಿದ್ದುಪಡಿ ಕಾಯ್ದೆಯು ಈಗಾಗಲೇ ಆಗಿರುವ ಐತಿಹಾಸಿಕ ಅನ್ಯಾಯವನ್ನು ಸರಿಪಡಿಸಲಿದೆ ಎ‌ಂದು ಪ್ರಧಾನಿ ನರೇಂದ್ರ ಮೋದಿಯವರು, ನೆರೆ ದೇಶಗಳ ಅಲ್ಪಸಂಖ್ಯಾತರಿಗೆ ‌ನೀಡಿರುವ ಭರವಸೆಯನ್ನು ಬಿಜೆಪಿ ಈಡೇರಿಸಲಿದೆ ಎಂದು ಅವರು ಹೇಳಿದ್ದಾರೆ. ದೆಹಲಿಯಲ್ಲಿ ನಡೆದಂತಹ ಎನ್.ಸಿ.ಸಿ. ರ್ಯಾಲಿಯಲ್ಲಿ ಪಾಲ್ಗೊಂಡಿದ್ದ ಪ್ರಧಾ‌ನಿಯವರು ಈ ಸಂದರ್ಭದಲ್ಲಿ ಪ್ರತ್ಯೇಕತೆ ವೇಳೆಯಲ್ಲಿ ಸಾಕಷ್ಟು ಅನ್ಯಾಯವಾಗಿದೆ ಎಂದು ಹೇಳಿದ್ದು, ದೇಶಕ್ಕೆ ಸ್ವಾತಂತ್ರ್ಯ ಬಂದ ಸಮಯದಲ್ಲಿ ಅಂದಿನ ಸರ್ಕಾರ ವಿಭಜನೆಯನ್ನು ಒಪ್ಪಿಕೊಂಡಿತ್ತು ಎಂದು ಅವರು ಹೇಳಿದ್ದಾರೆ.

ಆಗ ನೆಹರೂ ಅವರು ಲಿಯಾಖತ್ ಒಪ್ಪಂದದ ಅನ್ವಯ ಅಲ್ಪಸಂಖ್ಯಾತರ ರಕ್ಷಣೆ ಕುರಿತಾದ ಬಹು ಮುಖ್ಯವಾದ ಮಾತುಕತೆಯನ್ನು ನಡೆಸಿದ್ದರು. ಅಂದು ಗಾಂಧೀಜಿ ಅವರು ಅದನ್ನೇ ಬಯಸಿದ್ದರು. ಈಗ ಭಾರತ ಅಂದು ನೀಡಿದ್ದ ಭರವಸೆಯನ್ನು ಈಡೇರಿಸಲು ಸರ್ಕಾರವು ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಪರಿಚಯಿಸಿದೆ ಎಂದು ಹೇಳುವ ಮೂಲಕ ಸಿಎಎ ಯನ್ನು ಸಮರ್ಥನೆ ಮಾಡಿಕೊಂಡಿದ್ದಾರೆ. ಇದೇ ಸಂದರ್ಭದಲ್ಲಿ ಅವರು ಸಿಎಎ ಯನ್ನು ವಿರೋಧಿಸುತ್ತಿರುವವರ ವಿರುದ್ಧ ತೀವ್ರ ವಾಗ್ದಾಳಿಯನ್ನು ನಡೆಸಿದ್ದಾರೆ.

ಸಿಎಎ ಯನ್ನು ವಿರೋಧಿಸುವವರು ಮತ ಬ್ಯಾಂಕ್ ರಾಜಕೀಯವನ್ನು ಮಾಡುತ್ತಿದ್ದಾರೆಂದು ಆರೋಪ ಮಾಡುತ್ತಾ, ದಲಿತರ ಮೇಲಿನ ದೌರ್ಜನ್ಯವನ್ನು ಅವರು ಏಕೆ ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದ್ದಾರೆ. ಕೆಲವರು ತಮ್ಮನ್ನು ತಾವು ದಲಿತ ಧ್ವನಿ ಎಂದು ನಟನೆ ಮಾಡುತ್ತಿದ್ದು, ಅದೇ ಜನರು ಪಾಕಿಸ್ತಾನದಲ್ಲಿ ದಲಿತರ ಮೇಲೆ ಆಗುತ್ತಿರುವ ದೌರ್ಜನ್ಯವನ್ನು ಕಡೆಗಣಿಸಿದ್ದಾರೆ. ಪಾಕಿಸ್ತಾನದಲ್ಲಿ ಕಿರುಕುಳಕ್ಕೆ ಒಳಗಾಗಿ ಆ ದೇಶ ತೊರೆದು ಭಾರತಕ್ಕೆ ಬರುವವರಲ್ಲಿ ಹೆಚ್ಚಿನವರು ದಲಿತರು ಎಂಬುದನ್ನು ಅವರು ಮರೆತಿದ್ದಾರೆ ಎಂದು ಹೇಳುತ್ತಾ ನಮ್ಮ ಸರ್ಕಾರ ಮಾಡಿದ ನಿರ್ಧಾರವನ್ನು ವಿರೋಧ ಪಕ್ಷದವರು ಅಪಪ್ರಚಾರ ಮಾಡುತ್ತಿದ್ದಾರೆ ಎಂದಿದ್ದಾರೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here