ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಪ್ರವಾಹದಿಂದ ತತ್ತರಿಸಿರುವ ಕರ್ನಾಟಕಕ್ಕೆ ಪರಿಹಾರ ಕಾರ್ಯಗಳಿಗಾಗಿ ಕೂಡಲೇ ಅನುದಾನ ಬಿಡುಗಡೆಗೆ ಕ್ರಮವಹಿಸುವಂತೆ ಮನವಿ ಮಾಡಿದರು.ಇದಕ್ಕೆ ಸ್ಪಂದಿಸಿದ ಪ್ರಧಾನಿ ನರೇಂದ್ರ ಮೋದಿ, ಕೂಡಲೇ ನಷ್ಟದ ಅಂದಾಜು ಮಾಡಲು ಕೇಂದ್ರ ಸರ್ಕಾರದ ಅಧ್ಯಯನ ತಂಡವನ್ನು ಕಳುಹಿಸಲಾಗುವುದು ಎಂದು ಭರವಸೆ ನೀಡಿದರು.

ಕರ್ನಾಟಕದ ಪ್ರವಾಹ ಪರಿಸ್ಥಿತಿಯ ಗಂಭೀರತೆಯ ಕುರಿತು 45 ನಿಮಿಷಗಳ ಕಾಲ ಚರ್ಚಿಸಿ, ಪ್ರಧಾನಿಗೆ ಮನವರಿಕೆ ಮಾಡಿದ ಮುಖ್ಯಮಂತ್ರಿ, ರಾಜ್ಯದಲ್ಲಿ ಹಿಂದೆಂದೂ ಕಂಡರಿಯದ ನಷ್ಟ ಸಂಭವಿಸಿದೆ. ಪುನರ್ನಿಮಾಣ ಮತ್ತು ಪರಿಹಾರ ಕಾರ್ಯಗಳಿಗೆ ಹೆಚ್ಚುವರಿ ಅನುದಾನ ಅಗತ್ಯವಿದೆ ಎಂದು ವಿವರಿಸಿದರು.

ಈ ಸಂದರ್ಭದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಉಪಸ್ಥಿತರಿದ್ದರು.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here