ರಾಜ್ಯದಲ್ಲಿ ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಾಳೆಯಿಂದ ನೈಟ್ ಕರ್ಫ್ಯೂ ಮತ್ತು ಸರ್ಕಾರಿ ನೌಕರರಿಗೆ ವಾರದಲ್ಲಿ 5 ದಿನ ಕೆಲಸಕ್ಕೆ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಹೊರಡಿಸಿದೆ.ಕೋವಿಡ್ ವಿಚಾರವಾಗಿ ಇಂದು ಸಿಎಂ ಬಿಎಸ್ ಯಡಿಯೂರಪ್ಪ ಅವರು ನಡೆಸಿದ ತುರ್ತು ಸಭೆಯ ಬಳಿಕ ಮಾತನಾಡಿದ ಸಚಿವ ಅಶೋಕ್ ಅವರು, ಸಿಎಂ ಬಿಎಸ್ ಯಡಿಯೂರಪ್ಪನವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನಕ್ಕೆ ಬರಲಾಗಿದೆ. ಅದರಂತೆ ನಾಳೆಯಿಂದ ರಾತ್ರಿ 8ರಿಂದ ಬೆಳಗ್ಗೆ 5 ಗಂಟೆಯವರೆಗೂ ನೈಟ್ ಕರ್ಫ್ಯೂ, ಜುಲೈ 5ರಿಂದ ಪ್ರತಿ ಭಾನುವಾರ ಲಾಕ್ ಡೌನ್ ಮಾಡಲು ಹೊಸ ಮಾರ್ಗಸೂಚಿ ಹೊರಡಿಸಲಾಗಿದೆ. ಇನ್ನು ಸರ್ಕಾರಿ ನೌಕರರೂ ಕೊರೋನಾಗೆ ತುತ್ತಾಗುತ್ತಿರುವುದರಿಂದ ಮುಂದಿನ ವಾರದಿಂದ 5 ದಿನ ಮಾತ್ರ ಸರ್ಕಾರಿ ಕಚೇರಿಗಳು ಕೆಲಸ ನಿರ್ವಹಿಸಲಿವೆ.

ಕೊವೀಡ್ 19 ತಡೆಗೆ ಕಟ್ಟುನಿಟ್ಟಿನ ನಿರ್ಧಾರ ತೆಗೆದುಕೊಳ್ಳಲು ಇಂದು ನಡೆದ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು.ಎಸ್ಎಸ್ಎಲ್ಸಿ ಪರೀಕ್ಷೆ ಮುಗಿಯುವುದಕ್ಕಾಗಿ ಕಾಯುತ್ತಿದ್ದೇವೆ. ಪರೀಕ್ಷೆ ಮುಗಿದ ನಂತರ ಕಠಿಣ ಕ್ರಮ ಜಾರಿ ಮಾಡ್ತೇವೆ. ಲಾಕ್ಡೌನ್ ಬದಲಾಗಿ ಕಟ್ಟು ನಿಟ್ಟಿನ ಕ್ರಮ ಜಾರಿ ಮಾಡಲಾಗುವುದು. ಇವತ್ತಿನ ಸಭೆಯಲ್ಲಿ ಮೂರು ಪ್ರಮುಖ ನಿರ್ಧಾರ ಗಳು ಆಗಿವೆ. ಅವುಗಳನ್ನು ಸಿಎಂ ಯಡಿಯೂರಪ್ಪ ಅವರೇ ಪ್ರಕಟಿಸಲಿದ್ದಾರೆ ಎಂದು ಹೇಳಿದರು.

ತಜ್ಞ ವೈದ್ಯರ ಸಲಹೆಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಣಿಸಿದೆ.

ಅವರ ಸಲಹೆಗಳಂತೆ ಇಂದಿನ ಸಭೆಯಲ್ಲಿ ಕೆಲ ತೀರ್ಮಾನ ಮಾಡಲಾಗಿದೆ. ಅಂತರ್ ಜಿಲ್ಲೆಯ ಸಂಚಾರ ನಿರ್ಬಂಧ ಸೇರಿದಂತೆ ಪ್ರಮುಖ ಮೂರು ವಿಷಯಗಳ ಬಗ್ಗೆ ನಿರ್ಧಾರ ಮಾಡಲಾಗಿದ್ದು, ಆ ಮೂರು ನಿರ್ಧಾರಗಳು ಏನೆಂದು ಕೆಲವೇ ಕ್ಷಣಗಳಲ್ಲಿ ಸಿಎಂ ಬಿಎಸ್ವೈ ಪ್ರಕಟಿಸಲಿದ್ದಾರೆ ಎಂದು ಆರ್.ಅಶೋಕ್ ಹೇಳಿದರು.
ಖಾಸಗಿ ಆಸ್ಪತ್ರೆಗಳಿಗೆ ನಾವು ಮಾಡಿರುವ ದರವನ್ನು ಅವರು ಫಾಲೋ ಮಾಡಬೇಕು. ಸರ್ಕಾರ ಈಗಾಗಲೇ ದರ ಪಟ್ಟಿ ಪ್ರಕಟಿಸಿದೆ. ಅದರಂತೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಬೇಕು. ಖಾಸಗಿ ಆಸ್ಪತ್ರೆಗಳಿಗೆ ಸರ್ಕಾರ ಏನು ಬೇಡಿಕೊಳ್ಳುವುದಿಲ್ಲ. ಕೊರೋನಾದಂಥ ಯುದ್ಧದ ಸಂದರ್ಭದಲ್ಲಿ ಖಾಸಗಿ ಆಸ್ಪತ್ರೆಗಳಿಗೆ ಸರ್ಕಾರ ಬೇಡಿಕೊಳ್ಳುವುದಿಲ್ಲ. ಆದೇಶ ಮಾಡುತ್ತಿದೆ. ಸರ್ಕಾರದ ಸೂಚನೆಗಳನ್ನು ಖಾಸಗಿ ಆಸ್ಪತ್ರೆಗಳು ಪಾಲಿಸಲೇಬೇಕು. ಸೂಚನೆಗಳನ್ನು ಪಾಲಿಸದಿದ್ದರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ. ಅವರು ತಪ್ಪು ಮಾಡಿದರೆ ಒಂದು ವರ್ಷ ಜೈಲು ಶಿಕ್ಷೆಯೂ ಆಗಬಹುದು ಎಂದು ಖಾಸಗಿ ಆಸ್ಪತ್ರೆಗಳಿಗೆ ಆರ್.ಅಶೋಕ್ ಎಚ್ಚರಿಕೆ ನೀಡಿದರು.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here