ರಾಮನಗರದಲ್ಲಿ ನಡೆಯುವ ಉಪಚುನಾವಣೆಯಲ್ಲಿ ಕರ್ನಾಟಕದ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರು ಜೆಡಿಎಸ್ ನಿಂದ ಸ್ಪರ್ಧಿಸುತ್ತಾರೆ ಎಂಬ ಮಾಹಿತಿ ಇಂದು ಹೊರಬಿದ್ದಿದೆ‌.ರಾಮನಗರ ಮತ್ತು ಚನ್ನಪಟ್ಟಣ ಎರಡೂ ಕ್ಷೇತ್ರಗಳಲ್ಲಿ ಕುಮಾರಸ್ವಾಮಿ ಸ್ಪರ್ಧಿಸಿ ಎರಡು ಕ್ಷೇತ್ರಗಳಲ್ಲಿ ಸಹ ಕುಮಾರಸ್ವಾಮಿ ಗೆಲುವು ಕಂಡಿದ್ದರು.ಹೀಗಾಗಿ ಚನ್ನಪಟ್ಟಣ ಕ್ಷೇತ್ರವನ್ನು ಉಳಿಸಿಕೊಂಡು ರಾಮನಗರ ಕ್ಷೇತ್ರದಲ್ಲಿ ರಾಜೀನಾಮೆ ನೀಡಿದ್ದ ಕುಮಾರಸ್ವಾಮಿ ಅವರು ಈ ಬಾರಿ ರಾಮನಗರ ಕ್ಷೇತ್ರದಲ್ಲಿ ನಿಖಿಲ್ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸುವ ಯೋಚನೆಯಲ್ಲಿದ್ದಾರೆ‌.

ಈ ಬಗ್ಗೆ ಅನಿತಾ ಕುಮಾರಸ್ವಾಮಿ ಸುಳಿವು ನೀಡಿದ್ದು, ನಿಖಿಲ್ ಕುಮಾರಸ್ವಾಮಿ ರಾಮನಗರದಲ್ಲಿ ಸ್ಪರ್ಧೆ ಮಾಡುವ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಪಕ್ಷದ ನಾಯಕರು ತೀರ್ಮಾನವನ್ನು ಕೈಗೊಳ್ಳಲಿದ್ದಾರೆ ಎಂಬುವುದನ್ನು ಸ್ಪಷ್ಟಪಡಿಸಿದ್ದಾರೆ.ಈ ಬಗ್ಗೆ ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು, ಚುನಾವಣಾ ದಿನಾಂಕ ಘೋಷಣೆ ಬಳಿಕ ಈ ಬಗ್ಗೆ ನಿರ್ಧಾರವನ್ನು ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here