ಉಂಟಾದ ಭೀಕರ ಮಳೆ ಹಾಗೂ ಪ್ರವಾಹದಿಂದ, ಹಿಂದೆಂದೂ ಕಾಣದಂತಹ ಆಪತ್ತು ರಾಜ್ಯದಲ್ಲಿ ಎದುರಾಗಿದ್ದು, ಜನರ ಜೀವನವನ್ನು ಮತ್ತೆ ಕಟ್ಟಿ ಕೊಡಬೇಕಿದೆ. ಅವರಿಗೆ ಮೂಲ ಸೌಕರ್ಯಗಳನ್ನು ಒದಗಿಸಬೇಕಿದೆ. ರಾಜ್ಯದಲ್ಲಿ ಒಟ್ಟು16 ಜಿಲ್ಲೆಗಳ 80 ತಾಲೂಕುಗಳನ್ನು ಪ್ರವಾಹ ಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ತಿಳಿಸಿದ್ದಾರೆ. ಮುಖ್ಯಮಂತ್ರಿ ಅವರು ಗೃಹ ಕಛೇರಿ ಕೃಷ್ಣಾದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ, ಸದ್ಯ 6000 ಕೋಟಿ ರೂ. ನಷ್ಟದ ಅಂದಾಜು ಮಾಡಲಾಗಿದ್ದು, 3000 ಕೋಟಿ ರೂ. ಬಿಡುಗಡೆಗೆ ಮನವಿ ಮಾಡಲಾಗಿದೆಯೆಂದು ಅವರು ಮಾದ್ಯಮಗಳಿಗೆ ತಿಳಿಸಿದ್ದಾರೆ.

ಕೇಂದ್ರ ವಿತ್ತ ಸಚಿವೆಯವರಾದ ನಿರ್ಮಲಾ ಸೀತಾರಾಮನ್ ಅವರನ್ನು, ಪ್ರವಾಹದ ಬಗ್ಗೆ ತಿಳಿಯಲು ಪ್ರಧಾನಿಯವರು ರಾಜ್ಯಕ್ಕೆ ಕಳುಹಿಸಿದ್ದು, ಅವರು ವಸ್ತು ಸ್ಥಿತಿ ಅವಲೋಕಿಸಲಿದ್ದಾರೆ ಎಂದು ಯಡಿಯೂರಪ್ಪನವರು ತಿಳಿಸಿದ್ದಾರೆ. ರಾಷ್ಟ್ರೀಯ ವಿಪತ್ತು ಘೋಷಣೆ ಬಗ್ಗೆ ಇನ್ನು ಎರಡು ಮೂರು ದಿನ ಅವಲೋಕಿಸಿ ಮನವಿಗೆ ಚಿಂತಿಸಲಾಗುವುದು ಎಂದು ಹೇಳಿದರು. ಸಿಆರ್ ಪಿಎಫ್ ನ 3000 ಸಿಬ್ಬಂದಿಯ ನೇಮಕ ಪ್ರಕ್ರಿಯೆಯನ್ನು ಮುಂದೂಡುವಂತೆ ಕೇಂದ್ರಕ್ಕೆ ಮನವಿ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.

ಹಣಕಾಸು ಸಚಿವರು ಆಗಿರುವ ನಿರ್ಮಲಾ ಸೀತಾರಾಮನ್ ಅವರು ರಾಜ್ಯಸಭೆಗೆ ಕರ್ನಾಟಕದಿಂದಲೇ ಆಯ್ಕೆಯಾಗಿರುವುದರಿಂದ ಅವರು ರಾಜ್ಯಕ್ಕೆ ಹೆಚ್ಚುವರಿ ಪರಿಹಾರವನ್ನು ಒದಗಿಸುವರು ಎಂಬುದು ರಾಜ್ಯದ ನಿರೀಕ್ಷೆಯಾಗಿದೆ.
ಜನರಿಗೆ ಆದಷ್ಟು ಬೇಗ ಪರಿಹಾರವನ್ನು ಒದಗಿಸುವ ಜವಾಬ್ದಾರಿಯು ಈಗ ಸರ್ಕಾರದ ಮೇಲಿದ್ದು, ಯಾವ ರೀತಿ ನಿರ್ವಹಣೆ ಮಾಡಲಿದೆ ಎಂಬುದರ‌‌ ಮೇಲೆ ಎಲ್ಲರ ದೃಷ್ಟಿ ನೆಟ್ಟಿದೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here