Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ODI WC 2023: ಇಂದು ಭಾರತ – ಆಸ್ಟ್ರೇಲಿಯಾ ನಡುವೆ ಫೈನಲ್ ಫೈಟ್

ಅಹಮದಾಬಾದ್‌: ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವಿನ 2023ರ ಫೈನಲ್​ ಫೈಟ್‌ ಇಂದು (ಭಾನುವಾರ) ವಿಶ್ವದ ಅತಿ ದೊಡ್ಡ ಕ್ರಿಕೆಟ್​ ಸ್ಟೇಡಿಯಂ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಈಗಾಗಲೇ ಈ ಪಂದ್ಯಕ್ಕೆ ಉಭಯ ತಂಡಗಳ ಆಟಗಾರರು ಭರ್ಜರಿ ತಯಾರಿ ನಡೆಸಿದ್ದಾರೆ. ಫೈನಲ್​ ಪಂದ್ಯದಲ್ಲಿ 20 ವರ್ಷಗಳ ಬಳಿಕ ಮುಖಾಮುಖಿಯಾಗುತ್ತಿವೆ. ಇಂದು ಭಾರತ ತಂಡದ ಪ್ಲೇಯಿಂಗ್ ಇಲೆವೆನ್ ನಲ್ಲಿ ಒಂದು ಬದಲಾವಣೆಯ ಸಾಧ್ಯತೆ ಇದೆ. ಏಕೆಂದರೆ ಅಹಮದಾಬಾದ್ ಪಿಚ್​ ಸ್ಪಿನ್ ಬೌಲರ್​ಗಳಿಗೆ ಸಹಕಾರಿಯಾಗಿದೆ. ಹೀಗಾಗಿ ಅನುಭವಿ ಸ್ಪಿನ್ನರ್​ ರವಿಚಂದ್ರನ್ ಅಶ್ವಿನ್​ಗೆ ಅವಕಾಶ ಸಿಗಬಹುದು. ಅಲ್ಲದೆ ಸೂರ್ಯಕುಮಾರ್ ಯಾದವ್ ಅವರನ್ನು ತಂಡದಿಂದ ಕೈ ಬಿಡಬಹುದು. ಈ ಮೂಲಕ ಟೀಮ್ ಇಂಡಿಯಾ ಆಲ್​ರೌಂಡರ್​ಗಳಾಗಿ ರವೀಂದ್ರ ಜಡೇಜಾ ಹಾಗೂ ರವಿಚಂದ್ರನ್ ಅಶ್ವಿನ್ ಅವರನ್ನು ಬಳಸಿಕೊಳ್ಳುವ ಸಾಧ್ಯತೆಯಿದೆ. ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ರವಿಚಂದ್ರನ್ ಅಶ್ವಿನ್, ಕುಲ್ದೀಪ್ ಯಾದವ್, ಜಸ್​ಪ್ರಿತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.