Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ODI WC 2023 Final Match: ಟಾಸ್ ಗೆದ್ದ ಆಸ್ಟ್ರೇಲಿಯಾ ಬೌಲಿಂಗ್ ಆಯ್ಕೆ

ಅಹಮದಾಬಾದ್‌: ಏಕದಿನ ವಿಶ್ವಕಪ್ 2023ರ ಫೈನಲ್ ಪಂದ್ಯದಲ್ಲಿ ಭಾರತದ ವಿರುದ್ಧ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಬೌಲಿಂಗ್ ಆಯ್ದುಕೊಂಡಿದ್ದಾರೆ. ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂದು ನಡೆಯುತ್ತಿರುವ ಪಂದ್ಯದಲ್ಲಿ ಭಾರತವು ಮೊದಲು ಬ್ಯಾಟಿಂಗ್‌ ಮಾಡಲಿದೆ. ಭಾರತಕ್ಕೆ ವಿಶ್ವಕಪ್ ಗೆದ್ದು ಕೊಡುವ ಹುಮ್ಮಸ್ಸಿನಲ್ಲಿ ಮಾಜಿ ನಾಯಕ ವಿರಾಟ್ ಕೊಹ್ಲಿ ಹಾಗೂ ಹಾಲಿ ನಾಯಕ ರೋಹಿತ್ ಶರ್ಮಾ ಇದ್ದಾರೆ. ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಜಸ್​ಪ್ರಿತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್. ಆಸ್ಟ್ರೇಲಿಯಾ ತಂಡ: ಪ್ಯಾಟ್ ಕಮಿನ್ಸ್ (ನಾಯಕ), ಟ್ರಾವಿಸ್ ಹೆಡ್, ಡೇವಿಡ್ ವಾರ್ನರ್, ಮಿಚ್ ಮಾರ್ಷ್, ಸ್ಟೀವ್ ಸ್ಮಿತ್, ಮಾರ್ಕಸ್ ಸ್ಟೊಯಿನಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ಜೋಶ್ ಇಂಗ್ಲಿಸ್, ಮಿಚೆಲ್ ಸ್ಟಾರ್ಕ್, ಆ್ಯಡಂ ಝಂಪಾ, ಜೋಶ್ ಹ್ಯಾಝಲ್‌ವುಡ್.