ಕೊರೊನಾವೈರಸ್ ಸೋಂಕು ದೇಶದಲ್ಲಿ ದಿನದಿಂದ ದಿನಕ್ಕೆ ಏರುತ್ತಲೇ ಸಾಗಿದೆ‌. ಕೊರೊನಾ ಸೋಂಕಿನ ನಿಯಂತ್ರಣಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅನೇಕ ಶಿಸ್ತಿನ ಕ್ರಮಗಳನ್ನು ಕೈಗೊಳ್ಳುವ ಪ್ರಯತ್ನದಲ್ಲಿ
ತೊಡಗಿವೆಯಾದರೂ ಕೂಡಾ ಕೊರೊನಾ ನಿಯಂತ್ರಣ ಮಾತ್ರ ಇನ್ನೂ ಹತೋಟಿಗೆ ಬರುತ್ತಿಲ್ಲ. ಸೋಂಕನ್ನು ನಿಯಂತ್ರಿಸುವ ಸಲುವಾಗಿ, ಸೋಂಕು ಹರಡದಂತೆ ತಡೆಯಲು ಪಾನ್ ಮಸಾಲ, ಗುಟ್ಕಾ ಸೇವನೆಗೆ ತಾತ್ಕಾಲಿಕ ನಿಷೇಧ ಹೇರಿತ್ತು ದೆಹಲಿ ಸರ್ಕಾರ. ಈಗ ಇದೇ ವಿಷಯವಾಗಿ ಮತ್ತೊಂದು ಮಹತ್ವದ ನಿರ್ಧಾರವನ್ನು ಮಾಡಿರುವ ಇಲ್ಲಿನ ಸರ್ಕಾರ ಈ ನಿಷೇಧವನ್ನು ಒಂದು ವರ್ಷದ ಅವಧಿಗೆ ವಿಸ್ತರಿಸಲಾಗಿದೆ.

ಹರಿಯಾಣ ಸರ್ಕಾರವು ಉತ್ತರಪ್ರದೇಶ ಸರ್ಕಾರವು ಕೂಡಾ ಒಂದು ವರ್ಷದ ಕಾಲ ಪಾನ್ ಮಸಾಲ, ಗುಟ್ಕಾ ಸೇವನೆಗೆ ನಿಷೇಧವನ್ನು ಹೇರಿದ್ದು, ಸರ್ಕಾರ ನೀಡಿರುವ ಆದೇಶದಂತೆ ಉತ್ಪಾದನೆ ಹಾಗೂ ಮಾರಾಟ ಮಾತ್ರವಲ್ಲದೆ, ಶೇಖರಿಸಿಟ್ಟುಕೊಳ್ಳಲು ಕೂಡಾ ಸದ್ಯಕ್ಕೆ ಯಾವುದೇ ರೀತಿಯ ಅನುಮತಿ ಇಲ್ಲ ಎಂದು ಆಹಾರ ಮತ್ತು ಔಷಧಿ ಪ್ರಾಧಿಕಾರದ ಡಿಎನ್ ಸಿಂಗ್ ಅವರು ಹೇಳಿದ್ದಾರೆ. 2000 ನೇ ವರ್ಷದ ಆಹಾರ ಮತ್ತು ಸುರಕ್ಷತಾ ಗುಣಮಟ್ಟ ಕಾಯ್ದೆ ಸೆಕ್ಷನ್ 30ರ ಅನ್ವಯ ಪಾನ್ ಮಸಾಲ ಬಳಕೆ ನಿಷೇಧ ಹಾಕಲಾಗಿದೆ.

ಈ ಆದೇಶವನ್ನು ಉಲ್ಲಂಘನೆ ಮಾಡಿದರೆ ಅಂತಹವರ ವಿರುದ್ಧ ಕಠಿಣ ಕ್ರಮವನ್ನು ಜರುಗಿಸಲಾಗುವುದು ಎಂದು ಅಧಿಕಾರಿಗಳು ಸೂಚನೆಯನ್ನು ನೀಡಿದ್ದಾರೆ. ಇನ್ನು ದೆಹಲಿಯಲ್ಲಿ
ದೆಹಲಿಯಲ್ಲಿ ಗುರುವಾರದಂದು 1652 ಕೊರೊನಾ ಸೋಂಕಿನ ಪ್ರಕರಣಗಳು ದಾಖಲಾಗಿದ್ದು, ಇಲ್ಲಿ ಗುಣಮುಖರಾಗುವವರ ಪ್ರಮಾಣದಲ್ಲಿ ಏರಿಕೆ ಕಂಡು ಬಂದಿದ್ದು, ಅದು 82% ಗೆ ಏರಿದೆ. 41 ಮಂದಿ ಮೃತಪಟ್ಟಿದ್ದು, ಒಟ್ಟಾರೆ, 1,16,993 ಪ್ರಕರಣಗಳು ದಾಖಲಾಗಿದ್ದು, ಇದುವರೆವಿಗೂ 3487 ಮಂದಿ ಮೃತಪಟ್ಟಿದ್ದಾರೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here