ಕೊರೋನಾ ಹಾಟ್ ಸ್ಪಾಟ್ ಆಗಿರುವ ಪಾದರಾಯನಪುರ ವಾರ್ಡ್ ನ ಕಾರ್ಪೊರೇಟರ್ ಇರ್ಮಾನ್ ಪಾಷಾ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಪಾದರಾಯನಪುರ ವಾರ್ಡ್ ಕಾರ್ಪೊರೇಟರ್ ಇಮ್ರಾನ್ ಪಾಷಾ ಅವರಿಗೆ ಶುಕ್ರವಾರ ಕೊರೊನಾ ಸೋಂಕು ದೃಢಪಟ್ಟಿದ್ದರೂ ಅವರು ಆಸ್ಪತ್ರೆ ಸೇರಿದ್ದು ಶನಿವಾರ ಮಧ್ಯಾಹ್ನದ ಹೊತ್ತಿಗೆ. ಇಮ್ರಾನ್ ಪಾಷಾ ಆಸ್ಪತ್ರೆಗೆ ದಾಖಲು ನಿರಾಕರಿಸಿ ಮೊಂಡಾಟ ಪ್ರದರ್ಶಿಸಿದ್ದರು. ಮನೆ ಬಳಿಗೆ ಪೊಲೀಸರು, ಆರೋಗ್ಯ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು ಬಂದರೂ ಇಮ್ರಾನ್ ಪಾಷಾ ಮನೆಯಿಂದ ಹೊರಬರಲಿಲ್ಲ.

ಕಾರ್ಪೊರೇಟರ್ ಇಮ್ರಾನ್ ತಂದೆ ಆರೀಫ್, ಶಾಸಕ ಜಮೀರ್ ಅಹ್ಮದ್ ಮಾತನ್ನೂ ಕೇಳಲಿಲ್ಲ. ಕೊನೆಗೆ ಪೊಲೀಸರು, ನೀವು ಆಸ್ಪತ್ರೆಗೆ ಬರಲಿಲ್ಲ ಅಂದ್ರೆ ಪ್ರಕರಣ ದಾಖಲಿಸಿ ಅರೆಸ್ಟ್ ಮಾಡ್ತೀವಿ ಎಂದು ವಾರ್ನಿಂಗ್ ಕೊಟ್ಟರು. ಸತತ ಮೂರು ಗಂಟೆಗಳ ಹೈಡ್ರಾಮಾ ಬಳಿಕ ಇಮ್ರಾನ್ ಪಾಷಾ ಪಿಪಿಇ ಕಿಟ್ ಸಮೇತ ಮನೆಯಿಂದ ಹೊರಬಂದು, ಜನರತ್ತ ಕೈಬೀಸಿ ಅಂಬುಲೆನ್ಸ್ ಹತ್ತಿ ವಿಕ್ಟೋರಿಯಾ ಆಸ್ಪತ್ರೆ ಸೇರಿದ್ದರು.ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆ ಇಮ್ರಾನ್ ಪಾಷಾ ಅವರನ್ನು ಆರೋಗ್ಯ ಅಧಿಕಾರಿಗಳು ಆಸ್ಪತ್ರೆಗೆ ಕರೆದುಕೊಂಡು ಹೋಗಲು ಪಾದರಾಯನಪುರಕ್ಕೆ ಹೋಗಿದ್ದರು. ಈ ವೇಳೆ ಇಮ್ರಾನ್ ಪಾಷಾ ಮನೆ ಬಳಿ ಹೈಡ್ರಾಮಾ ಸೃಷ್ಟಿಸಿ ನೂರಾರು ಜನ ಸೇರುವಂತೆ ಮಾಡಿದ್ದರು.

ಈ ಸಂಬಂಧ ಆರೋಗ್ಯ ಅಧಿಕಾರಿಗಳು ಜೆಜೆ ನಗರ ಪೊಲೀಸರಿಗೆ ದೂರು ನೀಡಿದ್ದರು. ಆರೋಗ್ಯ ಅಧಿಕಾರಿಗಳ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.ಬೆಂಗಳೂರಿನ ಜೆಜೆ ನಗರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 188 (ಸರ್ಕಾರಿ ಅಧಿಕಾರಿಗಳ ಕೆಲಸಕ್ಕೆ ಅಡ್ಡಿ), 270 (ವೈರಸ್ ಹಬ್ಬಿಸಲು ಯತ್ನ), 271 (ರೋಗ ನಿರೋಧಕ ನಿರ್ಬಂಧ ನಿಯಮವನ್ನು ಉಲ್ಲಂಘಿಸುವುದು) ಹಾಗೂ ಕ್ವಾರಂಟೈನ್ ನಿಯಮ ಉಲ್ಲಂಘನೆ ಆರೋಪದಡಿ ಪ್ರಕರಣ ದಾಖಲಾಗಿದೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here