ಭಾರತ ಕ್ರಿಕೆಟ್ ತಂಡದ ಹಿಟ್ ಮ್ಯಾನ್ ರೋಹಿತ್ ಶರ್ಮಾ. ಈ ವಿಶ್ವಕಪ್ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ತೋರುತ್ತಿರುವ ಹಿಟ್ ಮ್ಯಾನ್ ವಿಶ್ವಕಪ್ ನಲ್ಲಿ ರೋಹಿತ್ ಶರ್ಮಾ ಆಡಿರುವ ಮೂರೂ ಪಂದ್ಯಗಳಲ್ಲಿ ಎರಡು ಭರ್ಜರಿ ಶತಕ ಹಾಗೂ ಒಂದು ಅರ್ಧ ಶತಕ ಸಿಡಿಸಿ ಬ್ಯಾಟಿಂಗ್ ಸರಾಸರಿಯಲ್ಲಿ ಭಾರತದ ಪರ ಹೆಚ್ಚು ರನ್ ಗಳಿಸಿದ್ದಾರೆ. ಮೊನ್ನೆ ನಡೆದ ಪಾಕಿಸ್ತಾನದ ವಿರುದ್ಧದ ಪಂದ್ಯದಲ್ಲಿ ಭರ್ಜರಿ 140 ರನ್ ಗಳಿಸಿ ಪಂದ್ಯ ಪುರುಷೋತ್ತಮ ಪ್ರಶಸ್ತಿ ಪಡೆದಿದ್ದರು. ವಿಶ್ವಕಪ್ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಟೀಂ ಇಂಡಿಯಾ ಗೆಲುವು ಸಾಧಿಸಿದ ನಂತರ ನಡೆದ ಸುದ್ದಿಗೋಷ್ಠಿಯಲ್ಲಿ ಪಾಕಿಸ್ತಾನದ ಪತ್ರಕರ್ತರ ಪ್ರಶ್ನೆಗೆ

ರೋಹಿತ್ ಶರ್ಮಾ ನೀಡಿದ ಉತ್ತರ ನಗೆ ಅಲೆಯೆಬ್ಬಿಸಿತ್ತು.ಪಾಕ್ ವಿರುದ್ಧ 140 ರನ್ ಬಾರಿಸಿ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದ ರೋಹಿತ್ ಶರ್ಮಾ ಅವರಲ್ಲಿ ಪಾಕ್ ಪತ್ರಕರ್ತರು, ನೀವು ಪಾಕಿಸ್ತಾನದ ಬ್ಯಾಟ್ಸ್‌ಮೆನ್‌ಗಳಿಗೆ ಏನು ಸಲಹೆ ನೀಡಬಯಸುತ್ತೀರಿ? ಎಂದು ಕೇಳಿದ್ದಾರೆ. ಈ ಪ್ರಶ್ನೆಗೆ

ನಗುತ್ತಾ ಉತ್ತರಿಸಿದ ಹಿಟ್ ಮ್ಯಾನ್, ನಾನು ಪಾಕಿಸ್ತಾನದ ಕೋಚ್ ಆದರೆ ನಾನು ಹೇಳುವೆ. ಈಗ ಏನು ಹೇಳಲಿ? ಎಂದಿದ್ದಾರೆ. ರೋಹಿತ್‌ನ ಈ ಉತ್ತರ ಕೇಳಿ ಅಲ್ಲಿದ್ದ ಪತ್ರಕರ್ತರೆಲ್ಲಾ ಜೋರಾಗಿ ನಕ್ಕು ಸುದ್ದಿಗೋಷ್ಠಿ ಮುಂದುವರಿಸಿದ್ದಾರೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here