ಪಾಟೀಲ್ ಪುಟ್ಟಪ್ಪ ವಿಧಿವಶ…

ಪಾಪು ಎಂಬ ಕಾವ್ಯನಾಮದಿಂದಲೇ ಖ್ಯಾತರಾದವರು ಪಾಟೀಲ ಪುಟ್ಟಪ್ಪ.ಕನ್ನಡ ಸಾಹಿತ್ಯ ಮತ್ತು ಪತ್ರಿಕಾ ರಂಗದಲ್ಲಿ ಬಹುದೊಡ್ಡ ಹೆಸರು ಗಳಿಸಿದವರು. ಬೆಳಗಾವಿಯಲ್ಲಿ ನಡೆದ 70ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದ ಪಾಪುರವರು ಕನ್ನಡ ನಾಡು, ನುಡಿಗಾಗಿ ಜೀವನದುದ್ದಕ್ಕೂ ಶ್ರಮಿಸಿದವರು.ಇಂದು ಅವರು ನಮ್ಮನ್ನೆಲ್ಲ ಅಗಲಿದ್ದಾರೆ. ಪಾಟೀಲ ಪುಟ್ಟಪ್ಪ ಅವರ ನಿಧನ ಇಡೀ ಕರ್ನಾಟಕಕ್ಕೆ ತುಂಬಲಾರದ ಬಹುದೊಡ್ಡ ನಷ್ಟ.
ಶತಾಯುಷಿ ಗಳಾಗಿದ್ದ ಪಾಟೀಲ್ ಪುಟ್ಟಪ್ಪ ಅವರು ಕನ್ನಡದ ದಿಟ್ಟ ಹೋರಾಟಗಾರರಾಗಿ ಏಕೀಕರಣದ ರೂವಾರಿಗಳಾಗಿ ನಾಡಿನ ಭಾಷೆ, ಸಂಸ್ಕೃತಿಗೆ ಅಪಾರವಾದ ಕಾಣಿಕೆ ಸಲ್ಲಿಸಿದ್ದರು.ಅತ್ಯುತ್ತಮ ಸಾಹಿತಿಯಾಗಿ 70ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. ಅವರು ಸಾಹಿತ್ಯ ಕ್ಷೇತ್ರಕ್ಕೆ ಅಪೂರ್ವ ಕೊಡುಗೆ ನೀಡಿದ್ದರು. ಹಾಗೆಯೇ ಪತ್ರಕರ್ತರಾಗಿ ತಮ್ಮ ಕೊನೆಯ ದಿನಗಳವರೆಗೂ ವೃತ್ತಿ ಪ್ರೀತಿಯನ್ನು ಉಳಿಸಿಕೊಂಡಿದ್ದರು.
ನಮ್ಮೆಲ್ಲರ ಕನ್ನಡ ಕಣ್ಮಣಿ ಪಾಟೀಲ್ ಪುಟ್ಟಪ್ಪ ಅವರು ನಮ್ಮನ್ನು ಬಿಟ್ಟು ಆಗಲಿರುವುದು ನಾಡಿಗೆ ತುಂಬಲಾರದ ನಷ್ಟವಾಗಿದೆ.
ಇವರ ಅಗಲಿಕೆಯಿಂದ ಅವರ ಕುಟುಂಬದವರಿಗೆ ಮತ್ತು ಅವರ ಅಭಿಮಾನಿಗಳು ಮತ್ತು ಶಿಷ್ಯ ಸಮೂಹಕ್ಕೆ ಆಗಿರುವ ನೋವನ್ನು ಭರಿಸುವ ಶಕ್ತಿಯನ್ನು ಆ ದೇವರು ದಯಪಾಲಿಸಲಿ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here