ಇಂದು ತುಮಕೂರು ಸಿದ್ಧಗಂಗಾ ಮಠದ ಶ್ರೀ ಶ್ರೀ ಸಿದ್ದಲಿಂಗ‌ ಮಹಾ ಸ್ವಾಮಿಗಳವರು ಇಂದು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಭೇಟಿ ನೀಡಿ ಪೇಜಾವರ ಶ್ರೀಗಳ ಆರೋಗ್ಯ ವಿಚಾರಿಸಿದರು. ಪೇಜಾವರ ಶ್ರೀಗಳು ಕಳೆದ ಒಂದು ವಾರದಿಂದಲೂ ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದು, ಅವರಿಗೆ ಕೃತಕ ಉಸಿರಾಟ ವ್ಯವಸ್ಥೆಯಲ್ಲಿಯೇ ತಜ್ಞವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.
ಇಂದು ಆಸ್ಪತ್ರೆಗೆ ತೆರಳಿದ ಕನಕಪುರದ ದೇಗುಲ ಮಠದ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮಿಗಳವರು, ಸಿದ್ಧಗಂಗಾ ಶ್ರೀಗಳವರು, ಕಣ್ಣೂರು ಮಠದ ಶ್ರೀಗಳವರು, ಬಂಡೇಮಠದ ಶ್ರೀ ಗಳವರು, ಬೆಟ್ಟಳ್ಳಿ ಶ್ರೀಗಳವರು, ಗುರುವಣ್ಣ್ನ ಮಠದ ಶ್ರೀಗಳವರು, ಬೇವೂರು ಮಠದ ಶ್ರೀಗಳವರು, ಪವಾಡ ಬಸವಣ್ಣದೇವರ ಮಠದ ಶ್ರೀಗಳವರು , ಸಿಡಗಳಲೆ

ಮಠದ ಶ್ರೀಗಳವರು ಹಾಗು ಇನ್ನಿತರ ಹರಗುರು ಚರಮೂರ್ತಿಗಳವರೊಡನೆ ಭೇಟಿ ನೀಡಿ ಪೇಜಾವರ ಮಠದ ಕಿರಿಯ ಯತಿ ಶ್ರೀ ವಿಶ್ವ ಪ್ರಸನ್ನ ತೀರ್ಥ ಶ್ರೀಪಾದರು, ಪೇಜಾವರ ಮಠದ ಆಪ್ತರು, ವೈದ್ಯರೊಂದಿಗೆ ಚರ್ಚಿಸಿದರು. ಪೇಜಾವರ ಶ್ರೀಗಳು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸಿದರು.
ಪೇಜಾವರ ಸ್ವಾಮೀಜಿ ಅನಾರೋಗ್ಯದಿಂದ ಬಳಲುತ್ತಿದ್ದು ಕೆಎಂಸಿ ಆಸ್ಪತ್ರೆಯಲ್ಲಿ ಕಳೆದ 6 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ.

ಆಸ್ಪತ್ರೆ  ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ಸ್ವಾಮೀಜಿಯ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ನಿರಂತರ ಚಿಕಿತ್ಸೆ ನೀಡುತ್ತಿರುವುದರಿಂದ ಸ್ಥಿರವಾಗಿದೆ. ಶ್ರೀಗಳು ವೆಂಟಿಲೇಟರ್ ಮೂಲಕ ಉಸಿರಾಟ ನಡೆಸುತ್ತಿದ್ದಾರೆ. ಅವರಾಗಿಯೂ ಉಸಿರಾಡಲು ಪ್ರಯತ್ನ ನಡೆಸುತ್ತಿದ್ದಾರೆ ಎಂದು ಕೆಎಂಸಿ ವೈದ್ಯಕೀಯ ಅಧೀಕ್ಷಕರು ಮಾಹಿತಿ ನೀಡಿದ್ದಾರೆ.

 

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here