ಬೆಂಗಳೂರಿನ ಈ ಹಿಂದಿನ ಪೊಲೀಸ್ ಕಮಿಷನರ್ ಅಲೋಕ್ ಕುಮಾರ್ ಅವರಿಗೆ ಶಾಕಿಂಗ್ ನ್ಯೂಸ್ ಬಂದಿದೆ. ಫೋನ್ ಟ್ಯಾಪಿಂಗ್ ಪ್ರಕರಣದಲ್ಲಿ ಹೆಸರು ಕೇಳಿ ಬಂದ ಹಿನ್ನೆಲೆಯಲ್ಲಿ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ದಿಢೀರ್ ವರ್ಗಾವಣೆ ಮಾಡಲಾಗಿದೆ.ಸಿಬಿಐ ವಿಚಾರಣೆಗೊಳಪಡಿಸಿರುವ ಹಿನ್ನೆಲೆಯಲ್ಲಿ ಕೆಎಸ್‍ಆರ್‍ಪಿ ಎಡಿಜಿಪಿ ಹುದ್ದೆಯಿಂದ ಅಲೋಕ್ ಕುಮಾರ್ ಎತ್ತಂಗಡಿ ಮಾಡಲಾಗಿದೆ. ಸ್ಥಳ ನಿಯೋಜನೆ ಮಾಡದೇ ವರ್ಗಾವಣೆ ಮಾಡಿ ಸರ್ಕಾರ ಆದೇಶ ನೀಡಿದೆ. ಎಡಿಜಿಪಿ ಪಿ.ಎಸ್.ಸಂಧುಗೆ ಹೆಚ್ಚುವರಿಯಾಗಿ ಕೆಎಸ್‍ಆರ್‍ಪಿ ಎಡಿಜಿಪಿ ಹುದ್ದೆ ಹೊಣೆ ವಹಿಸಿ ಸರ್ಕಾರ ಆದೇಶ ನೀಡಿದೆ.

ಪಿ.ಎಸ್. ಸಂಧು ಸದ್ಯ ಸಿಟಿಆರ್‍ಎಸ್ ಎಡಿಜಿಪಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಫೋನ್ ಟ್ಯಾಪಿಂಗ್ ಕೇಸ್‍ನಲ್ಲಿ ಅಲೋಕ್ ಕುಮಾರ್ ಇವತ್ತು ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ.ಕೇವಲ ರಾಜಕೀಯ ಮುಖಂಡರು ಮಾತ್ರವಲ್ಲದೇ ಆದಿಚುಂಚನಗಿರಿಯ ನಿರ್ಮಲಾನಂದ ಶ್ರೀಗಳ ಫೋನ್ ಕೂಡ ಕದ್ದಾಲಿಕೆಯಾಗಿರೋದು ಬೆಳಕಿಗೆ ಬಂದಿದೆ.

ಹೊಸಕೋಟೆಯ ಕಟ್ಟಿಗೇನಹಳ್ಳಿಯಲ್ಲಿ ಕೆಲ ಶ್ರೀಗಂಧ ಕಳ್ಳರನ್ನ ಪತ್ತೆ ಮಾಡಲಾಗಿತ್ತು. ಈ ವೇಳೆ, ಶ್ರೀಗಂಧ ಕಳ್ಳರ ನಂಬರ್‍ಗಳ ಜೊತೆ ಆದಿ ಚುಂಚನಗಿರಿ ಶ್ರೀ ನಿರ್ಮಲಾನಂದ ಸ್ವಾಮೀಜಿಯವರ ಮೊಬೈಲ್ ನಂಬರ್ ಸಹ ಟ್ಯಾಪಿಂಗ್‍ಗೆ ಹಾಕಲಾಗಿತ್ತು ಎನ್ನಲಾಗಿದೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here