ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ತೀವ್ರವಾದ ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದು, ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಅವರ ಆರೋಗ್ಯದ ಕುರಿತಾಗಿ ಹಾಗೂ ಅವರ ಪರಿಸ್ಥಿತಿಯ ಕುರಿತಾಗಿ ಸಾಮಾಜಿಕ ಜಾಲತಾಣಗಳಲ್ಲಿ ಅನೇಕ ವದಂತಿಗಳು ಹರಿದಾಡುತ್ತಿವೆ. ಈ ವದಂತಿಗಳು ಪ್ರಣಬ್ ಮುಖರ್ಜಿ ಅವರ ಮಗ ಅಭಿಜಿತ್ ಮುಖರ್ಜಿ ಅವರು ತೆರೆ ಎಳೆದಿದ್ದಾರೆ. ತಂದೆಯ ಆರೋಗ್ಯದ ಬಗ್ಗೆ ಹರಡಿರುವಂತಹ ವದಂತಿಗಳು ಸುಳ್ಳು ಎಂದು ಸ್ಪಷ್ಟನೆ ಯನ್ನು ನೀಡುತ್ತಾ ಅವರು ಟ್ವೀಟ್ ಮಾಡಿದ್ದು, ನನ್ನ ತಂದೆ ಜೀವಂತವಾಗಿದ್ದಾರೆ ಎಂದು ತಿಳಿಸಿದ್ದಾರೆ.

ಅಭಿಜಿತ್ ಮುಖರ್ಜಿ ಅವರು ಟ್ವೀಟ್ ಮಾಡಿದ್ದು, ಅದರಲ್ಲಿ, “ನನ್ನ ತಂದೆ ಶ್ರೀ ಪ್ರಣಬ್ ಮುಖರ್ಜಿ ಇನ್ನೂ ಜೀವಂತವಾಗಿದ್ದಾರೆ ಮತ್ತು ಹೆಮೋಡೈನಮಿಕ್ ಆಗಿ ಸ್ಥಿರರಾಗಿದ್ದಾರೆ! ಸೋಷಿಯಲ್ ಮೀಡಿಯಾದಲ್ಲಿ ಹೆಸರಾಂತ ಪತ್ರಕರ್ತರು ಪ್ರಸಾರ ಮಾಡುತ್ತಿರುವ ಊಹಾಪೋಹಗಳು ಮತ್ತು ನಕಲಿ ಸುದ್ದಿಗಳನ್ನು ನೋಡಿದಾಗ ಭಾರತದಲ್ಲಿ ಮಾಧ್ಯಮವು ನಕಲಿ ಸುದ್ದಿಗಳ ಕಾರ್ಖಾನೆಯಾಗಿ ಮಾರ್ಪಟ್ಟಿದೆ ಎಂಬುದನ್ನು ಸ್ಪಷ್ಟವಾಗಿ ಪ್ರತಿಬಿಂಬಿಸುತ್ತದೆ.” ಎಂದು ಮಾದ್ಯಮಗಳ ವಿರುದ್ಧ ತಮ್ಮ ಅಸಮಾಧಾನವನ್ನು ಹೊರ ಹಾಕಿದ್ದಾರೆ.

ಪ್ರಣಬ್ ಮುಖರ್ಜಿ ಅವರಿಗೆ ಆರೋಗ್ಯ ಸಮಸ್ಯೆ ಉಂಟಾದ ಹಿನ್ನೆಲೆಯಲ್ಲಿ ಮೊನ್ನೆ ಅವರಿಗೆ ದೆಹಲಿಯ ಆರ್ಮಿ ರೆಫರಲ್ ಆ್ಯಂಡ್ ರಿಸರ್ಚ್​ ಆಸ್ಪತ್ರೆಯಲ್ಲಿ ಮೆದುಳು ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಇದಕ್ಕೂ ಮುನ್ನ ಅವರನ್ನ ಕೊರೊನಾ ಪರೀಕ್ಷೆ ಒಳಪಡಿಸಲಾಗಿತ್ತು. ಆ ವರದಿ ಪಾಸಿಟಿವ್ ಆಗಿತ್ತು. ಸದ್ಯ ಪ್ರಣಬ್ ಮುಖರ್ಜಿ ಅವರು ವೆಂಟಿಲೇಟರ್ ಸಪೋರ್ಟ್​​​​ನಲ್ಲಿದ್ದಾರೆ ಎಂದು ಆಸ್ಪತ್ರೆ ತಿಳಿಸಿದೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here