ಕಿರಿಕ್ ಪಾರ್ಟಿ ಮೂಲಕ ಕನ್ನಡ ಸಿನಿ ರಸಿಕರಿಗೆ ಪರಿಚಿತವಾಗಿ ನಂತರ ದಕ್ಷಿಣ ಭಾರತದ ಖ್ಯಾತ ನಟಿಯಾಗಿ ಹೆಸರು ಮಾಡುತ್ತಿರುವ ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಅವರು ಮೈಸೂರು ಮತ್ತು ಕೊಡಗು  ಸಂಸದ ಪ್ರತಾಪ್ ಸಿಂಹ ಅವರ ಬಳಿ ಕೊಡಗು ಆಸ್ಪತ್ರೆ ಅಭಿಯಾನದ ಬಗ್ಗೆ ಮಾಹಿತಿ ಕೇಳಿದ್ದಾರೆ. ರಶ್ಮಿಕಾ ಮಂದಣ್ಣ ಅವರು ತಮ್ಮ ಟ್ವಿಟ್ಟರಿನಲ್ಲಿ, “ಪ್ರತಾಪ್ ಸಿಂಹ ಸರ್ ಕೊಡಗಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕುರಿತು ನಾನು ಟ್ವೀಟ್ ಮಾಡುತ್ತಿದ್ದೇನೆ. ದಯವಿಟ್ಟು ನನಗೆ ಮಾಹಿತಿ ಸಿಗಬಹುದೇ?. ಈ ಬಗ್ಗೆ ಅಭಿವೃದ್ಧಿ ಅಥವಾ ಬೇರೆ ಯಾವುದೇ ಮಾಹಿತಿ ನಮಗೆ ತಿಳಿಸಿದರೆ ಸಂತೋಷವಾಗುತ್ತದೆ” ಎಂದು ಟ್ವೀಟ್ ಮಾಡಿದ್ದಾರೆ.

ಈ ಹಿಂದೆ ರಶ್ಮಿಕಾ ಅವರು, ತುಂಬಾ ಮುಖ್ಯವಾಗಿ ಬೇಕಾಗಿರುವುದು ಅಂದರೆ ಅದು ಆಸ್ಪತ್ರೆ ಹಾಗೂ ನಮ್ಮ ಕೂರ್ಗ್ ನಲ್ಲಿ ಆಸ್ಪತ್ರೆ ಇಲ್ಲ. ಒಳ್ಳೆಯ ಆಸ್ಪತ್ರೆಗಾಗಿ ನಾವು ದೂರ ಪ್ರಯಾಣಿಸಬೇಕು. ಅದರ ಬದಲು ಕೊಡಗಿನಲ್ಲಿ ಆಸ್ಪತ್ರೆ ಇದ್ದರೆ ಜನರಿಗೆ ತುಂಬಾನೇ ಸಹಾಯವಾಗುತ್ತದೆ. ದಯವಿಟ್ಟು ಸ್ಪಂದಿಸಿ ಎಂದು ಸಿಎಂಗೆ ಟ್ಯಾಗ್ ಮಾಡಿ #WeNeedEmergencyHospitalInKodagu ಹ್ಯಾಶ್ ಟ್ಯಾಗ್ ಬಳಸಿ ರಶ್ಮಿಕಾ ಮಂದಣ್ಣ ಟ್ವೀಟ್ ಮಾಡಿದ್ದರು.

ರಶ್ಮಿಕಾ ಅವರ ಟ್ವೀಟ್‍ಗೆ ಪ್ರತಾಪ್ ಸಿಂಹ ಅವರು, ಕೊಡಗು ಆಸ್ಪತ್ರೆ ಅಭಿಯಾನ ಕುರಿತಾಗಿ ಮುಖ್ಯಮಂತ್ರಿಗಳನ್ನು ಭೇಟಿಯಾಗಲ್ಲೂ ಮನವಿ ಪತ್ರವನ್ನು ಬರೆದಿದ್ದೇನೆ. ಅಷ್ಟೇ ಅಲ್ಲದೇ ಈ ಅಭಿಯಾನಕ್ಕೆ ಮೋದಿಜೀ ಸರ್ಕಾರ ಕೂಡ ಸಂಪೂರ್ಣ ಸಹಕಾರ ನೀಡುತ್ತದೆಂಬ ಭರವಸೆಯನ್ನು ನೀಡುತ್ತೇನೆ ಎಂದು ಟ್ವೀಟ್ ಮಾಡಿದ್ದರು. ಪ್ರತಾಪ್ ಅವರ ಟ್ವೀಟ್‍ಗೆ ರಶ್ಮಿಕಾ, ನಮ್ಮ ಮನವಿಯನ್ನು ಇಷ್ಟು ಬೇಗ ಪರಿಗಣಿಸಿದ್ದಕ್ಕೆ ಧನ್ಯವಾದಗಳು ಸರ್. ಇದು ನಮಗೆ ತುಂಬಾ ಮುಖ್ಯವೆನಿಸುತ್ತದೆ ಎಂದು ಟ್ವೀಟ್ ಮಾಡಿ ಧನ್ಯವಾದ ತಿಳಿಸಿದ್ದರು.

 

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here