ಬೆಂಗಳೂರು, ಸೆ. 11: ಬೈಕ್ ಟ್ಯಾಕ್ಸಿ ನಿರ್ಬಂಧ, ಚಾಲಕರಿಗೆ ಸಹಾಯಧನ ಸೇರಿದಂತೆ ಸರ್ಕಾರದ ಮುಂದೆ ಹಲವು ಬೇಡಿಕೆ ಇಟ್ಟಿದ್ದ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟತಮ್ಮ ಪ್ರತಿಭಟನೆಯನ್ನು ಹಿಂಪಡೆದಿವೆ.
ಖಾಸಗಿ ಸಾರಿಗೆ ಒಕ್ಕೂಟಗಳ ಬಂದ್ ಹಿನ್ನೆಲೆಯಲ್ಲಿ ನಗರದಲ್ಲಿ 3 ಲಕ್ಷ ಆಟೋ, 1.5 ಲಕ್ಷ ಟ್ಯಾಕ್ಸಿ, 20 ಸಾವಿರ ಗೂಡ್ಸ್ ವಾಹನಗಳು, 5 ಸಾವಿರಕ್ಕೂ ಹೆಚ್ಚು ಖಾಸಗಿ ಶಾಲಾ ವಾಹನಗಳು, 80 ಸಾವಿರ ಸಿಟಿ ಟ್ಯಾಕ್ಸಿ, ಕಾರ್ಪೋರೆಟ್ ಕಂಪನಿ ಬಸ್ ಗಳು ಬಂದ್ ಆಗಿದ್ದವು. ಪ್ರತಿಭಟನಾ ಸ್ಥಳಕ್ಕೆ ಸಾರಿಗೆ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಭೇಟಿ ನೀಡಿ ಕೆಲ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ ಸಾರಿಗೆ ಸಚಿವರು
ಪ್ರತಿಭಟನಾಕಾರರ ಮನವೊಲಿಸಲು ಯಶಸ್ವಿಯಾಗಿದ್ದಾರೆ.
Disclaimer: This Story is auto-aggregated by a Syndicated Feed and has not been Created or Edited By City Big News Staff.