ಬೆಂಗಳೂರು: ಈ ದಿನ ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರು ಹಾಗೂ ಅಧ್ಯಕ್ಷರು, ಕರಾರಸಾ ನಿಗಮ ರವರು ನಿಗಮದ ವತಿಯಿಂದ ಪಾಯಿಂಟ್ ಟು ಪಾಯಿಂಟ್ ಮತ್ತು ವೇಗದೂತ ಕಾರ್ಯಾಚರಣೆಗೆ ನಿಯೋಜಿಸಲಾಗುವ ನೂತನ ಕರ್ನಾಟಕ ಸಾರಿಗೆ ವಾಹನದ ಪ್ರೋಟೋ ಟೈಪ್ ವಾಹನ ವಿನ್ಯಾಸವನ್ನು ನಿಗಮದ ಕೇಂದ್ರ ಕಛೇರಿಯಲ್ಲಿ ಪರಿಶೀಲಿಸಿದರು.
ಪ್ರಸ್ತುತ ಇಂದು ಪರಿಶೀಲಿಸಲಾದ ಪ್ರೋಟೋ ಟೈಪ್ ವಾಹನವು ಪಾಯಿಂಟ್ ಟು ಪಾಯಿಂಟ್ ಮತ್ತು ವೇಗದೂತ ವಾಹನವನ್ನಾಗಿ ಉಪಯೋಗಿಸಲಿದ್ದು, ಮುಂಬರುವ ಎಲ್ಲಾ ಹೊಸ ಬಸ್ಸುಗಳು ಈ ರೀತಿಯ ವಿನ್ಯಾಸ ವನ್ನು ಹೊಂದಲಿದೆ.
ಈ ಪ್ರೋಟೋ ಟೈಪ್ ಮಾದರಿಯನ್ನು ಪರಿಶೀಲಿಸಿದ ಮಾನ್ಯ ಸಾರಿಗೆ ಮಾತ್ತು ಮುಜರಾಯಿ ಸಚಿವರು ಹಾಗೂ ಅಧ್ಯಕ್ಷರು,ಮಾತನಾಡಿ, ಸಾರ್ವಜನಿಕ ಪ್ರಯಾಣಿಕರಿಗೆ ಉತ್ತಮ ಗುಣಮಟ್ಟದ ವಾಹನಗಳನ್ನು ಕಾರ್ಯಾಚರಣೆಗೊಳಿಸಿ, ಉತ್ತಮ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿ ಈ ಎಲ್ಲಾ ಬದಲಾವಣೆಗಳನ್ನು ತರಲಾಗಿದೆ ಹಾಗೂ ಈಗಾಗಲೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಇನ್ನು ಒಂದು ತಿಂಗಳ ಅವಧಿಯಲ್ಲಿ ಹೊಸ ಬಸ್ಸುಗಳು ಬರಲಿದ್ದು, ಎಲ್ಲಾ ಹೊಸ ವಾಹನಗಳು ಈ ಮಾದರಿಯ ವಿನ್ಯಾಸವನ್ನು ಹೊಂದಿರಲಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಡಾ.ಎನ್.ವಿ.ಪ್ರಸಾದ್ ಭಾಆಸೇ, ಕಾರ್ಯದರ್ಶಿಗಳು ಸಾರಿಗೆ ಇಲಾಖೆ, ವಿ.ಅನ್ಬುಕುಮಾರ್, ಭಾ.ಆ.ಸೇ, ವ್ಯವಸ್ಥಾಪಕ ನಿರ್ದೇಶಕರು, ಕ ರಾ ರ ಸಾ ನಿಗಮ, ಶ್ರೀಮತಿ. ಜಿ.ಸತ್ಯವತಿ ಭಾಆಸೇ, ವ್ಯವಸ್ಥಾಪಕ ನಿರ್ದೇಶಕರು, ಬಿಎಂಟಿಸಿ ಹಾಗೂ ನಿಗಮದ ಹಿರಿಯ ಅಧಿಕಾರಿಗಳು ಹಾಜರಿದ್ದರು.
Disclaimer: This Story is auto-aggregated by a Syndicated Feed and has not been Created or Edited By City Big News Staff.