PSI ಹುದ್ದೆ ಆಕಾಂಕ್ಷಿತರಿಗೆ ಗುಡ್ ನ್ಯೂಸ್.!
ಬೆಂಗಳೂರು: ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಹುದ್ದೆ ಆಸೆಯಲ್ಲಿರುವ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಶೀಘ್ರವೇ PSI ಹುದ್ದೆಗೆ ನೇಮಕಾತಿ ಪ್ರಕ್ರಿಯೆ ಆರಂಭಿಸುವುದಾಗಿ ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.
ಪಿಎಸ್‌ಐ ಪರೀಕ್ಷೆ ಸುಗಮವಾಗಿ ನಡೆದಿದ್ದು, ಆದಷ್ಟು ಬೇಗ ಮೌಲ್ಯಮಾಪನ ಮಾಡಿ ಫಲಿತಾಂಶ ಪ್ರಕಟಿಸುತ್ತೇವೆ. ನಂತರ ತಕ್ಷಣ ನೇಮಕಾತಿ ಪ್ರಕ್ರಿಯೆ ಶುರು ಮಾಡುತ್ತೇವೆ ಎಂದಿದ್ದಾರೆ. 403 PSI ಹುದ್ದೆಗೂ ಸದ್ಯದಲ್ಲೇ ಪರೀಕ್ಷೆ ನಡೆಸುವುದಾಗಿ ಮಾಹಿತಿ ನೀಡಿದ್ದಾರೆ.