ಕನ್ನಡ ಚಿತ್ರರಂಗದ ಪ್ರಸಿದ್ಧ ನಟರಲ್ಲಿ ಮುಂಚೂಣಿಯಲ್ಲಿರುವ ನಟರೆಂದರೆ ಎಂದರೆ ಅದು ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಮತ್ತು ರಾಕಿಂಗ್ ಸ್ಟಾರ್ ಯಶ್ ‌. ಪುನೀತ್ ರಾಜ್‍ಕುಮಾರ್ ಮತ್ತು ಯಶ್ ನಡುವಿನ ಬಾಂಧವ್ಯ ಅಂದಿನಿಂದ ಇಂದಿನವರೆಗೂ ಉತ್ತಮವಾಗಿದೆ. ಆಗಾಗ ರಾಕಿಂಗ್ ಸ್ಟಾರ್ ಯಶ್ ಅವರು ಪುನೀತ್ ರಾಜ್‍ಕುಮಾರ್ ಅವರನ್ನು ಭೇಟಿ ಮಾಡುವುದು ಎಲ್ಲರಿಗೂ ತಿಳಿದ ವಿಚಾರವೇ. ಈ ಹಿಂದೆ ರಣವಿಕ್ರಮ , ರಾಜಕುಮಾರ ಚಿತ್ರೀಕರಣದ ಸಮಯದಲ್ಲಿ ರಾಕಿಂಗ್ ಸ್ಟಾರ್ ಯಶ್ ಪುನೀತ್ ರಾಜ್‍ಕುಮಾರ್ ಅವರನ್ನು ಭೇಟಿ ಮಾಡಿದ್ದು ಎಲ್ಲರಿಗೂ ತಿಳಿದಿರುವ ವಿಚಾರವೇ ಸರಿ.

ಇದೀಗ ಮತ್ತೆ ಈ ಇಬ್ಬರೂ ಸ್ಟಾರ್ ಗಳು ಒಟ್ಟಾಗು ರಿಯಲ್ ಲೈಫ್ ನಲ್ಲಿ ಜೊತೆಯಾಗಿದ್ದಾರೆ‌ . ಕಳೆದ ಒಂದು ವಾರದಿಂದ ಮೈಸೂರಿನಲ್ಲಿ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಭಿನಯದ ಸಂತೋಷ್ ಆನಂದ್ ರಾಮ್ ನಿರ್ದೇಶನದ ಬಹುನಿರೀಕ್ಷೆಯ ಯುವರತ್ನ ಚಿತ್ರದ ಚಿತ್ರೀಕರಣ ನಡೆಯುತ್ತಿದೆ. ಇನ್ನು ರಾಕಿಂಗ್ ಸ್ಟಾರ್ ಯಶ್ ಅಭಿನಯದ ಪ್ರಶಾಂತ್ ನೀಲ್ ನಿರ್ದೇಶನದ ಬಹುನಿರೀಕ್ಷೆಯ ಕೆಜಿಎಫ್ ೨ ಚಿತ್ರದ

ಚಿತ್ರೀಕರಣ ನಡೆಯುತ್ತಿದೆ. ಈ ವೇಳೆ ಮೈಸೂರಿನ ಖಾಸಗಿ‌ ಹೋಟೇಲಿನಲ್ಲಿ ಪುನೀತ್ ರಾಜ್‍ಕುಮಾರ್ ಮತ್ತು ಯಶ್ ಇಬ್ಬರೂ ಒಟ್ಟಿಗೆ ಊಟ ಮಾಡಿ ಉಭಯಕುಶಲೋಪರಿ ನಡೆಸಿದ್ದಾರೆ . ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದ್ದು ಪುನೀತ್ ರಾಜ್‍ಕುಮಾರ್ ಮತ್ತು ಯಶ್ ಅಭಿಮಾನಿಗಳಿಗೆ ಖುಷಿ‌ ನೀಡುತ್ತಿವೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here