ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ಬಹುನಿರೀಕ್ಷಿತ “ಜೇಮ್ಸ್” ಚಿತ್ರದ ಮುಹೂರ್ತ ಇಂದು ಬೆಂಗಳೂರಿನ ಆಂಜನೇಯನ ದೇಗುಲದಲ್ಲಿ ಅದ್ದೂರಿಯಾಗಿ ನಡೆದಿದೆ. ಚೇತನ್ ಕುಮಾರ್ ನಿರ್ದೇಶನದ “ಜೇಮ್ಸ್” ಚಿತ್ರದ ಬಗ್ಗೆ ಕಳೆದ ಒಂದು ವರ್ಷದಿಂದಲೂ ಭಾರಿ ನಿರೀಕ್ಷೆ ಮೂಡಿತ್ತು. ಜೇಮ್ಸ್ ಚಿತ್ರ ಆರಂಭ ಯಾವಾಗ ಎಂಬುದು ಪುನೀತ್ ರಾಜಕುಮಾರ್ ಅಭಿಮಾನಿಗಳ ಬಹುದಿನದ ಪ್ರಶ್ನೆಯಾಗಿತ್ತು. ಅಭಿಮಾನಿಗಳ ನಿರೀಕ್ಷೆಯ “ಜೇಮ್ಸ್”  ಚಿತ್ರಕ್ಕೆ ಇಂದು ಮುಹೂರ್ತ ಆಚರಿಸಿಕೊಳ್ಳುವ ಸುಸಂದರ್ಭ ಒದಗಿಬಂದಿದೆ. ಕಿಶೋರ್ ಪತ್ತಿಕೊಂಡ ನಿರ್ಮಿಸುತ್ತಿರುವ ಜೇಮ್ಸ್ ಚಿತ್ರಕ್ಕೆ ಕನ್ನಡ ಚಿತ್ರರಂಗದ ಯಶಸ್ವಿ ನಿರ್ದೇಶಕ ಚೇತನ್ ಕುಮಾರ್ ಆಕ್ಷನ್ ಕಟ್ ಹೇಳುತ್ತಿದ್ದು ಇದೊಂದು ಪಕ್ಕಾ ಆಕ್ಷನ್ ಎಲಿಮೆಂಟ್ಸ್ ಇರುವ ಕಮರ್ಷಿಯಲ್ ಚಿತ್ರ ಎಂದು ತಿಳಿದುಬಂದಿದೆ.

ಬೆಂಗಳೂರಿನ ಪ್ರಸಿದ್ಧ ಶ್ರೀ ಬಾಲಾಂಜನೇಯ ದೇಗುಲದಲ್ಲಿ ಚಿತ್ರಕ್ಕೆ ಇಂದು ಬೆಳಿಗ್ಗೆ ಅದ್ದೂರಿಯಾಗಿ ಮುಹೂರ್ತ ನೆರವೇರಿದೆ. ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಹಲವಾರು ಅಭಿಮಾನಿಗಳು ಜೇಮ್ಸ್ ಮುಹೂರ್ತಕ್ಕೆ ಬಂದು ನೆಚ್ಚಿನ ನಟನಿಗೆ ಶುಭ ಹಾರೈಸಿದ್ದಾರೆ. ಜೇಮ್ಸ್ ಚಿತ್ರದ ಮೊದಲ ದೃಶ್ಯಕ್ಕೆ ಪುನೀತ್ ರಾಜಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್ ಅವರು ಕ್ಲಾಪ್ ಮಾಡಿದರೆ

ರಾಘವೇಂದ್ರ ರಾಜಕುಮಾರ್ ಅವರು ಕ್ಯಾಮರಾ ಚಾಲನೆ ಮಾಡಿ  ಶುಭ ಹಾರೈಸಿದರು. ಜೇಮ್ಸ್  ಚಿತ್ರಕ್ಕೆ ಚರಣರಾಜ್ ಅವರು ಸಂಗೀತ ನಿರ್ದೇಶನ ಮಾಡುತ್ತಿದ್ದು,  ತಾರಾಗಣದಲ್ಲಿ ಯಾರು ಯಾರು ಕಾಣಿಸಿಕೊಳ್ಳುತ್ತಾರೆ ಮತ್ತು ಇನ್ನುಳಿದ ತಾಂತ್ರಿಕ ವರ್ಗದ ಮಾಹಿತಿಯನ್ನು  ಮುಂದಿನ ದಿನಗಳಲ್ಲಿ ತಿಳಿಸುವುದಾಗಿ ನಿರ್ದೇಶಕ ಚೇತನ್ ಕುಮಾರ್ ತಿಳಿಸಿದ್ದಾರೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here