ಸಂತೋಷ್ ಆನಂದರಾಮ್ ನಿರ್ದೇಶನದಲ್ಲಿ ಪುನೀತ್ ರಾಜ್ ಕುಮಾರ ನಟನೆಯ ಚಿತ್ರಕ್ಕೆ ಯುವರತ್ನ ಎಂದು ಟೈಟಲ್ ಫೈನಲ್ ಆಗಿದೆ. ಪವರ್ ಆಫ್ ಯೂತ್ ಎಂಬ ಟ್ಯಾಗ್ ಲೈನ್ ಹೊಂದಿರುವ ಯುವರತ್ನ ಟೈಟಲ್ ಅನ್ನು ಅಭಿಮಾನಿಯೊಬ್ಬರಿಂದ ಸಂತೋಷ್ ಬಹಿರಂಗ ಪಡಿಸಿದ್ದಾರೆ. ಈಗ ಸಂತೋಷ್ ಪ್ರೇಕ್ಷಕರಿಗೆ ಮತ್ತೊಂದು ಕುತೂಹಲ ಮೂಡಿಸಿದ್ದಾರೆ.
ಸಿನಿಮಾದಲ್ಲಿ ಪುನೀತ್ ಕಾಲೇಜ್ ವಿದ್ಯಾರ್ಥಿ ಪಾತ್ರದಲ್ಲಿ ನಟಿಸಿದ್ದಾರೆ, ಈಗಾಗಲೇ ಸಂತೋಷ್ ಆನಂದ್ ರಾಮ್ ಮತ್ತು ಪುನೀತ್ ಜೋಡಿಯಲ್ಲಿ ರಾಜಕುಮಾರ ಸಿನಿಮಾ ಸಖತ್ ಹಿಟ್ ಕಂಡಿತ್ತು, ಈಗ ಮತ್ತದೆ ಜೋಡಿ ಹೊಸ ಹಿಟ್ ನೀಡಲು ಸಿದ್ದತೆ ನಡೆಸಿದೆ, ಡಿಸೆಂಬರ್ ನಲ್ಲಿ ಸಿನಿಮಾ ಶೂಟಿಂಗ್ ಆರಂಭವಾಗಲಿದೆ, ಹೊಂಬಾಳೆ ಫಿಲ್ಮ್ಸ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಚಿತ್ರಕ್ಕೆ ವಿ. ಹರಿಕೃಷ್ಣ ಸಂಗೀತ ನೀಡಿದ್ದಾರೆ.

ರಾಜಕುಮಾರ ಚಿತ್ರಕ್ಕಾಗಿ ತಮಿಳು ನಟಿ ಪ್ರಿಯಾ ಆನಂದ್ ರನ್ನು ಕರೆತಂದಿದ್ದ ನಿರ್ದೇಶಕ ಸಂತೋಷ್ ಆನಂದ್ ರಾಮ್ ಇದೀಗ ಯುವರತ್ನ ಚಿತ್ರಕ್ಕಾಗಿ ಪುನೀತ್ ರಾಜಕುಮಾರ್ ಗೆ ನಾಯಕಿಯಾಗಿ ಮಿಲ್ಕ್ ಬ್ಯೂಟಿ ತಮನ್ನಾ ಭಾಟಿಯಾರನ್ನು ಕರೆ ತರುವ ಸಾಧ್ಯತೆ ಇದೆ. ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷೆಯ ಕೆಜಿಎಫ್ ಚಿತ್ರದಲ್ಲಿ ತಮನ್ನಾ ಭಾಟಿಯಾ ಐಟಂ ಸಾಂಗ್ ಗೆ ಹೆಜ್ಜೆ ಹಾಕಿದ್ದರು. ಇದೀಗ ತಮನ್ನಾರನ್ನೇ ಯುವರತ್ನ ಚಿತ್ರಕ್ಕೆ ಆಯ್ಕೆ ಮಾಡಲು ನಿರ್ದೇಶಕ ಸಂತೋಷ್ ಆನಂದ್ ರಾಮ್ ಉತ್ಸುಹಕರಾಗಿದ್ದಾರೆ.

ಇನ್ನು ಪುನೀತ್ ಜತೆ ನಟಿಸುವುದಕ್ಕೆ ತಮನ್ನಾ ಭಾಟಿಯಾ ಸಹ ಉತ್ಸುಹಕರಾಗಿದ್ದಾರೆ ಎಂದು ತಿಳಿದುಬಂದಿದೆ. ಕನ್ನಡದ ಜಾಗ್ವಾರ್ ಚಿತ್ರದಲ್ಲಿ ಐಟಂ ಸಾಂಗ್ ನಲ್ಲಿ ನಟಿಸುವ ಮೂಲಕ ಕನ್ನಡಕ್ಕೆ ಪಾದಾರ್ಪಣೆ ಮಾಡಿದ್ದರು. ನವೆಂಬರ್ 1ರಂದು ಪುನೀತ್ ಮತ್ತು ಸಂತೋಷ್ ಆನಂದ್ ರಾಮ್ ಮುಂದಿನ ಚಿತ್ರದ ಟೈಟಲ್ ಬಿಡುಗಡೆಯಾಗಿತ್ತು. ಆಗಿನಿಂದ ಚಿತ್ರದ ಕುರಿತಂತೆ ನಿರೀಕ್ಷೆಗಳು ಹೆಚ್ಚಾಗಿದೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here