ಶಿವಮೊಗ್ಗದಲ್ಲಿ ಈಗ ಉಪಚುನಾವಣೆಯ ಕದನ ಜೋರಾಗಿ ನಡೆಯುತ್ತಿದೆ. ಈ ಸಮಯದಲ್ಲಿ ರಾಜಕೀಯ ನಾಯಕರ ಕೆಸರೆರಚಾಟ ಜೋರಾಗಿಯೇ ನಡೆದಿತ್ತು. ಕಾಂಗ್ರೆಸ್ ಮತ್ತು ಜೆಡಿಎಸ್ ನ ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪ ಪರ ಕುಮಾರಸ್ವಾಮಿ ಹಾಗೂ ಕಾಂಗ್ರೆಸ್ ಮುಖಂಡರು ಜೋರಾಗಿಯೇ ಪ್ರಚಾರ ನಡೆಸುತ್ತಿದ್ದರು. ಇತ್ತ ಮಧು ಬಂಗಾರಪ್ಪ ಸಹೋದರ ಕುಮಾರ್ ಬಂಗಾರಪ್ಪ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸುತ್ತಿದ್ದರು. ಈ ಸಮಯದಲ್ಲಿ ಕುಮಾರ್ ಬಂಗಾರಪ್ಪ ಅವರು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಪ್ರಚಾರದ ಸಮಯದಲ್ಲಿ ಖಾಸಗಿ ವಿಷಯ ಮಾತಾಡಿ ಸಾಕಷ್ಟು ವಿವಾದ ಸೃಷ್ಟಿಸಿದ್ದರು.

ಕುಮಾರ್ ಬಂಗಾರಪ್ಪ ಅವರು ಮಾತನಾಡುವ ಬರದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ವೈಯಕ್ತಿಕ ವಿಷಯ ಮಾತನಾಡಿ ರಾಧಿಕಾ ಅವರನ್ನು ಕುಮಾರಸ್ವಾಮಿ ಅವರು ಚುನಾವಣಾ ಪ್ರಚಾರಕ್ಕೆ ಯಾಕೆ ಬಳಸಿಕೊಳ್ಳುತ್ತಿಲ್ಲ. ರಾಧಿಕಾ ಸಹ ಕುಮಾರಸ್ವಾಮಿ ಕುಟುಂಬದ ಒಂದು ಭಾಗವಿದ್ದಂತೆ ಅವರನ್ನು ಚುನಾವಣಾ ಗೆ ಬಳಸಿಕೊಳ್ಳಬೇಕು ಇಲ್ಲವಾದರೆ ಮುಂದೊಂದು ದಿನ ಮೀಟೂ ಆರೋಪದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಹೆಸರೂ ಕೇಳಿಬರುತ್ತದೆ. ಅದಕ್ಕೆ ಅವಕಾಶ ಮಾಡಿಕೊಡಬೇಡಿ ಎಂದು ಕುಮಾರಸ್ವಾಮಿ ಅವರಿಗೆ ಕುಮಾರ್ ಬಂಗಾರಪ್ಪ ಲೇವಡಿ ಮಾಡಿದ್ದರು‌.

ಇನ್ನ ಈ ವಿಷಯವಾಗಿ ನಟಿ ರಾಧಿಕ ಇದೇ ಮೊದಲ ಬಾರಿಗೆ ಈ ವಿಷಯವಾಗಿ ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ. ನನಗೆ ಮಾಡಲು ಸಾಕಷ್ಟು ಕೆಲಸಗಳಿವೆ. ಈ ಮೀಟೂ ಬಗ್ಗೆ ಮಾತನಾಡಲು ಸಮಯವಿಲ್ಲ. ಅದರ ಬಗ್ಗೆ ಕುಮಾರಸ್ವಾಮಿ ಮತ್ತು ಕುಮಾರ್ ಬಂಗಾರಪ್ಪ ಅವರೇ ಮಾತನಾಡುತ್ತಾರೆ. ಈ ವಿಷಯದಲ್ಲಿ ನಾನು ಬಲಿಪಶು ಆಗುವದು ನನಗೆ ಇಷ್ಟವಲ್ಲ ಎಂದು ಹೇಳುವ ಮೂಲಕ ಈ ವಿಷಯದ ಬಗ್ಗೆ ಡೋಂಟ್ ಕೇರ್ ಎಂದಿದ್ದಾರೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here