ಕರ್ನಾಟಕದಲ್ಲಿ ಚುನಾವಣೆಗೆ ಉಳಿದಿರುವುದು ಇನ್ನು ಕೆಲವೇ ಗಂಟೆಗಳು ಮಾತ್ರ.ಬಹಿರಂಗ ಸಮಾವೇಷಗಳು ಮುಕ್ತಾಯಗೊಳ್ಳುತ್ತಿವೆ.ಈಗ ಎಲ್ಲರ ಗಮನ ಈ ತಿಂಗಳ 15 ರ ಫಲಿತಾಂಶದ ಮೇಲಿದೆ.ಅತ್ತ ಬಿಜೆಪಿ ಪರ ರಾಷ್ಟ್ರದ ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯದಲ್ಲಿ ನಿರಂತರವಾಗಿ ಬಿಜೆಪಿ ಸಮಾವೇಶ ಮಾಡುತ್ತಿದ್ದಾರೆ.

ಇತ್ತ ಕಾಂಗ್ರೆಸ್ ಸಹ ಭರ್ಜರಿ ಪ್ರಚಾರದಲ್ಲಿ ತೊಡಗಿದೆ.ಕಾಂಗ್ರೆಸ್ ನ ಫೈರ್ ಬ್ಯಾಂಡ್ ರಾಹುಲ್ ಗಾಂಧಿ ಅವರು ಕರ್ನಾಟಕದಲ್ಲಿ ಚುನಾವಣ ಪ ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ.ಇಂದು ರಾತ್ರಿ ರಾಹುಲ್ ಗಾಂಧಿ ಅವರು ಕನ್ನಡಿಗರ ಆರಾಧ್ಯದೈವ ವರನಟ ಡಾ.ರಾಜ್‍ಕುಮಾರ್ ಅವರ ಪುಣ್ಯಭೂಮಿಗೆ ಭೇಟಿ ನೀಡಿ ಪುಷ್ಪ ನಮನ ಸಲ್ಲಿಸಿದರು.

ಅಣ್ಣಾವ್ರ ಪುಣ್ಯಭೂಮಿಗೆ ಭೇಟಿ ನೀಡಿದ ನಂತರ ಈ ವಿಷಯವನ್ನು ಸ್ವತಃ ರಾಹುಲ್ ಗಾಂಧಿ ಅವರು ತಮ್ಮ ಫೇಸ್‌ಬುಕ್‌ ಅಫಿಷಿಯಲ್ ಖಾತೆಯಲ್ಲಿ ಈ ರೀತಿಯಲ್ಲಿ ಹಂಚಿಕೊಂಡಿದ್ದಾರೆ.”ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕುಕರ್ನಾಟಕ ರತ್ನ ಡಾ.ರಾಜ್‍ಕುಮಾರ್ ಅವರ ಸಮಾಧಿಗೆ ಭೇಟಿ ನೀಡಿ ಪುಷ್ಪಾರ್ಚನೆ…

ಸಮರ್ಪಿಸಿ ನನ್ನ ಗೌರವನಮನವನ್ನು ಸಲ್ಲಿಸಿದೆನು.ಅವರ ಜೀವನದ ಆದರ್ಶಗಳು ಪ್ರತಿಯೊಬ್ಬರಿಗೂ ಸ್ಪೂರ್ತಿದಾಯಕ ಎಂದು ಕನ್ನಡದಲ್ಲೇ ಬರೆದಿದ್ದಾರೆ. ಇದಕ್ಕೂ ಮೊದಲು ಅಣ್ಣಾವ್ರ ಪುಣ್ಯಭೂಮಿಗೆ ನಮಸ್ಕರಿಸಿ ಪ್ರದಕ್ಷಿಣೆ ಕೂಡ

ರಾಹುಲ್ ಗಾಂಧಿ ಮಾಡಿದರು.ನಂತರ ಪಾರ್ವತಮ್ಮ ರಾಜ್‍ಕುಮಾರ್ ಅವರ ಸಮಾಧಿಗೂ ಪುಷ್ಪನಮನ ಸಲ್ಲುಸಿದರು.

“ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು”

ಕರ್ನಾಟಕದ ರತ್ನ ಡಾ. ರಾಜ್‍ಕುಮಾರ್ ಅವರ ಸಮಾಧಿಗೆ ಭೇಟಿ ನೀಡಿ ಪುಷ್ಪಾರ್ಚನೆ ಸಮರ್ಪಿಸಿ ನನ್ನ ಗೌರವನಮನವನ್ನು ಸಲ್ಲಿಸಿದೆನು. ಅವರ ಜೀವನದ ಆದರ್ಶಗಳು ಪ್ರತಿಯೊಬ್ಬರಿಗೂ ಸದಾ ಸ್ಪೂರ್ತಿದಾಯಕ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here