ಭಾರತ ಮತ್ತು ಚೀನಾ ನಡುವಿನ ಲಡಾಕ್ ಗಡಿಯಲ್ಲಿ ಭಾರತ ಚೀನಾ ಸೈನಿಕರ ನಡುವಿನ ಸಂಘರ್ಷ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ಮುಂದುವರಿಸಿದ್ದಾರೆ.ಇಂದು ವಿಡಿಯೋ ಒಂದನ್ನು ಟ್ಯಾಗ್ ಮಾಡಿ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ನಮ್ಮ ನಿಶಸ್ತ್ರ ಸೈನಿಕರನ್ನು ಕೊಲ್ಲಲು ಚೀನಾಗೆ ಎಷ್ಟು ಧೈರ್ಯ ಎಂದು ಗುಡುಗಿದ್ದಾರೆ. ಇಪ್ಪತ್ತು ಸೈನಿಕರ ಹತ್ಯೆ ಮಾಡಿದ ಚೀನಾ ಸೇನೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೇ ಸೈನಿಕರನ್ನು ಗಡಿಗೆ ನಿಶಸ್ತ್ರವಾಗಿ ಹುತಾತ್ಮರಾಗಲು ಕಳುಹಿಸಿದ್ದೇಕೆ ಎಂದು ಪ್ರಧಾನಿ ನರೇಂದ್ರ ಮೋದಿ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾದ ಸಮಯದಲ್ಲಿ ನಿನ್ನೆಯಿಂದ ಪ್ರಶ್ನೆಗಳ ಸುರಿ ಮಳೆಗೈಯುತ್ತಿರುವ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಮೌನದ ಬಗ್ಗೆ ನಿನ್ನೆ ಪ್ರಶ್ನಿಸಿದ್ದರು. ಭಾರತ ಮತ್ತು ಚೀನಾ ಗಡಿಭಾಗದಲ್ಲಿ ನಡೆದ ಸಂಘರ್ಷದ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ ಪ್ರಧಾನಿ ಮೋದಿಗೆ ಖಾರವಾದ ಪ್ರಶ್ನೆ ಕೇಳಿದ್ದರು.

ಪ್ರಧಾನ ಮಂತ್ರಿ ಯಾಕೆ ಮೌನವಾಗಿದ್ದಾರೆ? ಯಾಕೆ ಅವರು ಅವಿತುಕೊಂಡಿದ್ದಾರೆ? ಇಲ್ಲಿಯವರೆಗೂ ನಡೆದಿದ್ದು ಸಾಕು. ನಾವು ಅಲ್ಲಿ ಏನೂ ನಡೆಯುತ್ತಿದೆ ಎಂಬುದನ್ನು ತಿಳಿದುಕೊಳ್ಳಬೇಕು. ನಮ್ಮ ಸೈನಿಕರನ್ನು ಕೊಲ್ಲಲು ಚೀನಾಗೆ ಎಷು ಧೈರ್ಯವಿರಬೇಕು? ಅವರು ಹೇಗೆ ನಮ್ಮ ಭೂಮಿಯನ್ನು ತೆಗೆದುಕೊಳ್ಳುತ್ತಾರೆ ಎಂದು ಟ್ವೀಟ್ ಮಾಡಿದ್ದರು.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here