ಕಾಂಗ್ರೆಸ್ ಸಂಸದರಾದ ರಾಹುಲ್ ಗಾಂಧಿ ಅವರು ಮಾತನಾಡುವ ಭರದಲ್ಲಿ, ನಾನು ರಾಹುಲ್​ ಸಾವರ್ಕರ್​​​ ಅಲ್ಲ, ರಾಹುಲ್ ಗಾಂಧಿ ಎಂದು ಹೇಳಿಕೆಯನ್ನು ನೀಡುವುದರ ಮೂಲಕ ಸ್ವಾತಂತ್ರ್ಯ ಹೋರಾಟಗಾರರೊಬ್ಬರ ಹೆಸರನ್ನು ಹೇಳುತ್ತಾ ವಿವಾದಾತ್ಮಕ ಹೇಳಿಕೆ ನೀಡುವ ತಮ್ಮ ಚಾಳಿಯನ್ನು ಮುಂದುವರೆಸಿದ್ದಾರೆ. ಈ ವಿಷಯ ಈಗಾಗಲೇ ತೀವ್ರ ಚರ್ಚಗೆ ಕಾರಣವಾಗಿರುವಾಗಲೇ, ರಾಹುಲ್ ಗಾಂಧಿಯವರ ಈ ಹೇಳಿಕೆಗೆ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್​ನ ನೂತನ ಮಿತ್ರ ಪಕ್ಷವಾಗಿರುವ ಶಿವಸೇನೆ ಟ್ವೀಟ್ ಮಾಡುವ​ ಮೂಲಕ ಮಾನ್ಯ ರಾಹುಲ್​​ ಗಾಂಧಿಗೆ ಎಚ್ಚರಿಕೆಯನ್ನು ರವಾನಿಸಿದೆ.

ರಾಹುಲ್​ ಗಾಂಧಿ ವೀರ್​ ಸಾರ್ವಕರ್​ ಅವರಂತವರನ್ನ ಅವಮಾನಿಸುವುದು ತಪ್ಪು ಎಂದು ಅವರಿಗೆ ಎಚ್ಚರಿಕೆಯನ್ನು ನೀಡಿದೆ. ಪ್ರಸ್ತುತ ಭಾರತದಲ್ಲಿ ಮಹಿಳೆಯರ ಮೇಲೆ ದೌರ್ಜನ್ಯಗಳು ನಡೆಯುತ್ತಿರುವ ವಿಷಯದ ಬಗ್ಗೆ ಮಾತನಾಡುತ್ತಿದ್ದ ರಾಹುಲ್ ಗಾಂಧಿ ಅವರು ತಮ್ಮ ಮಾತಿನ ಮಧ್ಯೆ ಮೇಕ್​ ಇನ್​​ ಇಂಡಿಯಾ ಬದಲಿಗೆ ರೇಪ್​ ಇನ್​​ ಇಂಡಿಯಾ ಆಗಿದೆ ಎಂದು ಹೇಳಿಕೆ ನೀಡಿದ್ದರು. ರಾಹುಲ್​​ ಗಾಂಧಿ ಅವರ ಈ ಹೇಳಿಕೆಗೆ ಖಂಡನೀಯ ಹಾಗೂ ರಾಷ್ಟ್ರವನ್ನು ಅವಹೇಳನ ಮಾಡುವ ಹಕ್ಕು ಅವರಿಗಿಲ್ಲ ಎಂದು ಆರೋಪಿಸಿದ ಬಿಜೆಪಿ ನಾಯಕರು ರಾಹುಲ್ ಗಾಂಧಿ ಕ್ಷಮೆ ಕೋರಬೇಕೆಂದು ಒತ್ತಾಯಿಸಿದ್ದರು.

ಈ ವಿಚಾರಕ್ಕೆ ದೆಹಲಿಯ ರಾಮ್ ಲೀಲಾ ಮೈದಾನದಲ್ಲಿ ಮಾತನಾಡುತ್ತಾ ನಾನು ರಾಹುಲ್ ಸಾವರ್ಕರ್ ಅಲ್ಲ, ರಾಹುಲ್ ಗಾಂಧಿ. ನಾನು ನನ್ನ ಹೇಳಿಕೆಯ ಬಗ್ಗೆ ಕ್ಷಮಾಪಣೆ ಕೇಳುವುದಿಲ್ಲ ಎಂದರು‌. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಶಿವಸೇನೆ ನಾವು ಜವಹರಲಾಲ್ ನೆಹರೂ, ಮಹಾತ್ಮ ಗಾಂಧಿ ಅವರಿಗೆ ಗೌರವವನ್ನು ನೀಡುತ್ತೇವೆ. ನೀವು ಸಾವರ್ಕರ್ ಅವರನ್ನು ಗೌರವಿಸಬೇಕು. ಸೂಕ್ಷ್ಮ ಮತಿಗಳಿಗೆ ಹೆಚ್ಚಿನ ವಿವರಣೆ ಬೇಕಿಲ್ಲ ಎಂದು ಅವರು ಟ್ವೀಟ್ ಮೂಲಕ ಸಂದೇಶವನ್ನು ರವಾನಿಸಲಾಗಿದೆ.

 

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here