ರಾಜ್ಯದಲ್ಲಿ ಜನರ ಪ್ರಾಣಕ್ಕೆ ಸಂಚಕಾರ ತರುವಂತೆ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ವಿವಿಧ ಜಿಲ್ಲೆಗಳು ಹಾಗೂ ಅಲ್ಲಿನ ಜನರು ಮಳೆಯ ತೀವ್ರತೆಯಿಂದ ತತ್ತರಿಸಿ ಹೋಗಿದ್ದು, ಜನರು ಪ್ರವಾಹ ಪರಿಸ್ಥಿತಿಯಿಂದ ನಲುಗಿ ಹೋಗುತ್ತಿದ್ದಾರೆ. ರಾಜ್ಯ ಸರ್ಕಾರವು ಈಗಾಗಲೇ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಜನರಿಗೆ ಸೂಕ್ತವಾದ ನೆರವನ್ನು ನೀಡಲು ಧಾವಿಸಿದೆ. ಹಲವು ಜಿಲ್ಲೆಗಳಲ್ಲಿ ರಕ್ಷಣಾ ಕಾರ್ಯಗಳು ನಡೆಯುತ್ತಿವೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದಿಂದ ಸಹಾಯವಾಣಿಯನ್ನು ಆರಂಭಿಸಲಾಗಿದೆ. ಪ್ರವಾಹದಿಂದ ನಲುಗಿರುವ ಜನರು ಸಹಾಯವಾಣಿಗೆ ಸಂಪರ್ಕಿಸಿದಲ್ಲಿ ಅವರಿಗೆ ಅಗತ್ಯ ನೆರವು ದೊರೆಯಲಿದೆ ಎಂದು ತಿಳಿಸಿದೆ ಸರ್ಕಾರ.

ಪ್ರವಾಹ ಪೀಡಿತ ಹಲವು ಜಿಲ್ಲೆಗಳಲ್ಲಿ ಈಗಾಗಲೇ ನಿರಾಶ್ರಿತ ಕೇಂದ್ರಗಳನ್ನು ತೆರೆಯಲಾಗಿದ್ದು, ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದೆ. ಎಮೆರ್ಜನ್ಸಿ ನಂಬರ್ ಗಳು ಈ ಕೆಳಕಂಡಂತಿವೆ

080 1070, 080 22340676
ವಾಟ್ಸಾಪ್ ಸಂಖ್ಯೆ – 9008405955

ಫೈರ್ ಎಮರ್ಜೆನ್ಸಿ –  ಫ್ಲಡ್ ಕಂಟ್ರೋಲ್ ರೂಂ – 080 25573333

ವಾಟ್ಸಾಪ್ – 9513749080

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here