ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದ ರಾಮನಗರದ ಮರು ನಾಮಕರಣ ಅಥವಾ ಹೆಸರು ಬದಲಿಸುವ ವಿಷಯದಲ್ಲಿ ಬಿಜೆಪಿ ಸರ್ಕಾರ ಈಗ ತನ್ನ ನಿರ್ಧಾರವನ್ನು ಬದಲಿಸಿದೆ. ಮಾನ್ಯ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರು ಸ್ವತಃ ರಾಮನಗರದ ಹೆಸರನ್ನು ಬದಲಾಯಿಸುವಂತಹ ಯಾವುದೇ ಪ್ರಸ್ತಾಪ ಕೂಡಾ ಸದ್ಯಕ್ಕೆ ಸರ್ಕಾರದ ಮುಂದೆ ಇಲ್ಲ ಎನ್ನುವ ಮೂಲಕ ಅವರು ಈ ವಿವಾದಕ್ಕೆ ತೆರೆ ಎಳೆದಿದ್ದಾರೆ. ಯಡಿಯೂರಪ್ಪ ನವರು ಸ್ಪಷ್ಟವಾಗಿ ಈ ವಿಷಯವನ್ನು ತಿಳಿಸಿದ್ದಾರೆ ಎನ್ನಲಾಗಿದೆ.

ರಾಮನಗರದ ಹೆಸರನ್ನು ಅಭಿವೃದ್ಧಿಯ ಸಲುವಾಗಿ ನವ ಬೆಂಗಳೂರು ಎಂದು ಬದಲಾವಣೆ ಮಾಡಲಾಗುವುದು ಎನ್ನುವ ಸುದ್ದಿಯೊಂದು ಹರಡಿ, ಸಾಕಷ್ಟು ಸಂಚಲವನ್ನು ಸೃಷ್ಟಿಸಿದ್ದು ಮಾತ್ರವಲ್ಲದೇ, ಚರ್ಚೆಯನ್ನು ಕೂಡಾ ಹುಟ್ಟು ಹಾಕಿತ್ತು. ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಒಂದು ದೀರ್ಘವಾದ ಸಂದೇಶವನ್ನು ಟ್ವಿಟರ್ ಮೂಲಕ ತಿಳಿಸುತ್ತಾ, ಸರ್ಕಾರದ ನಿರ್ಧಾರದ ವಿರುದ್ಧ ತಮ್ಮ ಆಕ್ರೋಶವನ್ನು ಹೊರ ಹಾಕಿದ್ದರು. ಕುಮಾರಸ್ವಾಮಿ ಅವರು ಹೋರಾಟ ಮಾಡುವುದಾಗಿ ಎಚ್ಚರಿಕೆ ಕೂಡಾ ನೀಡಿದ್ದರು.

ಈ ವಿಷಯಕ್ಕೆ ಈಗ ಅಂತ್ಯ ಹಾಡಿರುವ ಸಿಎಂ ಯಡಿಯೂರಪ್ಪ ಅವರು ಕಾಂಗ್ರೆಸ್ ಮತ್ತು ಜೆಡಿಎಸ್ ರಾಮನಗರದ ಮರು ನಾಮಕರಣದ ಬಗ್ಗೆ ಅನಾವಶ್ಯಕವಾಗಿ ಚರ್ಚೆಯನ್ನು ನಡೆಸುತ್ತಿದ್ದು, ಸರ್ಕಾರಕ್ಕೆ ಮರುನಾಮಕರಣದಂತಹ ಯಾವುದೇ ಯೋಜನೆ ಇಲ್ಲ ಎಂದು ಸ್ಪಷ್ಟೀಕರಣವನ್ನು ನೀಡಿದ್ದಾರೆ. ಅವರು ಮಾತನಾಡುತ್ತ ಎರಡು ಪಕ್ಷಗಳ ನಾಯಕರು ಸುದ್ದಿಯಲ್ಲಿ ಇರಲು, ಗೊಂದಲದ ವಾತಾವರಣ ಸೃಷ್ಟಿಸಲು ಈ ರೀತಿ ಮಾಡುತ್ತಿದ್ದಾರೆ ಎಂದು ಟೀಕೆ ಮಾಡಿದ್ದಾರೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here