ಹೆಬ್ಬಾಳ್ಕರ್ ಅವರು ನೀಡಿದ ಕುಕ್ಕರ್ ಇನ್ನೂ ಚೆನ್ನಾಗಿದೆಯಾ ಎನ್ನುವ ಮೂಲಕ ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ ಅವರು ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಕುರಿತಾಗಿ ಹಾಸ್ಯ ಮಾಡಿದ್ದರು. ಅವರ ಮಾತಿಗೆ ಸಿಟ್ಟಾಗಿರುವ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಸಚಿವರ ವಿರುದ್ಧ ನ್ಯಾಯಾಂಗ ನಿಂದನೆಯ ದೂರು ದಾಖಲಿಸುವುದು ಮಾತ್ರವಲ್ಲದೇ ಅವರ ವಿರುದ್ಧ ಚುನಾವಣಾ ಆಯೋಗಕ್ಕೆ ಕೂಡಾ ದೂರು ನೀಡುವುದಾಗಿ ಹೇಳಿದ್ದಾರೆ. ಸಚಿವರು ಮಂಗಳವಾರದ ದಿನ ಬೆಳಗಾವಿ ಗ್ರಾಮೀಣ ಬಿಜೆಪಿ ಕಛೇರಿ ವೇಳೆ ಈ ರೀತಿಯ ಟೀಕೆಯನ್ನು ಮಾಡಿದ್ದರು.

ಸಚಿವರು ಕೇವಲ ಟೀಕೆ ಮಾಡಿದ್ದು ಮಾತ್ರವೇ ಅಲ್ಲದೇ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಕುಕ್ಕರ್ ಗಳನ್ನು ನೀಡುವುದಕ್ಕೆ ಹಣ ಕೂಡಾ ನಾನೇ ನೀಡಿದ್ದು ಎಂದು ಕೂಡಾ ಹೇಳಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಲಕ್ಷ್ಮೀ ಹೆಬ್ಬಾಳ್ಕರ್ ಅವರು ನಾವು ನಮ್ಮ ಹರ್ಷ ಶುಗರ್ಸ್ ಆರಂಭೋತ್ಸವದ ಸಂದರ್ಭದಲ್ಲಿ ಅದರ ಪ್ರಚಾರಕ್ಕಾಗಿ ಎಂದು ಅಧಿಕೃತವಾಗಿಯೇ ಕುಕ್ಕರ್ ವಿತರಿಸಿದ್ದೇವೆ. ಅದಕ್ಕೆ ಸಂಬಂಧಿಸಿದ ಎಲ್ಲಾ ಲೆಕ್ಕ ಹಾಗೂ ದಾಖಲೆಗಳು ನಮ್ಮ ಬಳಿ ಇದ್ದು, ನಾವು ಎಲ್ಲ ಜಿಎಸ್‌ಟಿ ಕೂಡ ತುಂಬಿದ್ದೇವೆ ಎಂದಿದ್ದಾರೆ‌. ರಮೇಶ ಜಾರಕಿಹೊಳಿ ದುಡ್ಡಿನಿಂದ ನಾವು ಕುಕ್ಕರ್ ವಿತರಿಸಿದ್ದರೆ ಅದಕ್ಕೆ ಅವರೇ ಸೂಕ್ತ ದಾಖಲೆ ಮತ್ತು ಲೆಕ್ಕ ಕೊಡಲಿ ಎಂದು ಅವರು ಹೇಳಿದ್ದಾರೆ.

ಅದೂ ಅಲ್ಲದೇ ವಿಷಯ ನ್ಯಾಯಾಲಯದಲ್ಲಿದ್ದು ಅದರ ಬಗ್ಗೆ ಮಾತನಾಡುವುದು ನ್ಯಾಯಾಂಗ ನಿಂದನೆ ಎಂದಿರುವ ಅವರು 2-3 ದಿನದಲ್ಲಿ ಬೆಂಗಳೂರಿಗೆ ಬಂದು, ಕಾನೂನು ಕ್ರಮ ತೆಗೆದುಕೊಳ್ಳುವ ಕುರಿತಾಗಿ ವಕೀಲರೊಂದಿಗೆ ಚರ್ಚೆ ಮಾಡುವುದಾಗಿಯೂ ತಿಳಿಸಿದ್ದಾರೆ. ಗೋಕಾಕ್ ನ ಜನ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿ ಮುಂದುವರೆಯಲಿ ಎಂದು ಓಟು ಹಾಕಿದ್ದಾರೆ ಹೊರತು ಇವರ ಮುಖ ನೋಡಿಯಲ್ಲ ಎಂದಿರುವ ಲಕ್ಷ್ಮೀ ಹೆಬ್ಬಾಳ್ಕರ್ ಅವರು
ನಾನು ಕಿತ್ತೂರು ರಾಣಿಯ ವಂಶಸ್ಥೆ. ನನ್ನದು ಹೋರಾಟದ ರಾಜಕಾರಣವಾಗಿದ್ದು ನಾನು. ಬೆದರಿಕೆಗಳಿಗೆ ಹೆದರುವವಳಲ್ಲ ಎಂದು ಹೇಳುತ್ತಾ, ನನ್ನ ಬೆಳಗಾವಿ ತಾಲೂಕಿನ ಸ್ವಾಭಿಮಾನಿ ಜನರಿಗಾಗಿ ಹೋರಾಟ ಮುಂದುವರಿಸುತ್ತೇನೆ ಎಂದು ಹೇಳಿದ್ದಾರೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here